ಮೈಸೂರು

ಕೆ.ಆರ್‌ ನಗರ: ಡಯಾಲಿಸಿಸ್‌ ಕೇಂದ್ರ ಉದ್ಘಾಟನೆ

ಕೆ.ಆರ್.ನಗರ/ಮೈಸೂರು: ಕೆ.ಆರ್ ನಗರ ಪಟ್ಟಣದ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಶಾಸಕ ಡಿ.ರವಿಕುಮಾರ್‌ ಮಂಗಳವಾರ ಉದ್ಘಾಟಿಸಿದರು.

ನಂತರ ಮಾತಮಾಡಿದ ಅವರು, ತಾಲೂಕಿನಲ್ಲಿ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಿದೆ. ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಆಗಾಗಿ ಈ ಕೇಂದ್ರ ಬಡವರಿಗೆ ಹೆಚ್ಚು ನೆರವಾಗಲಿದೆ ಎಂದರು.

ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ಆಸ್ಪತ್ರೆಯನ್ನು ಶುಚಿಯಾಗಿಡುವ ಜತೆಗೆ ರೋಗಿಗಳಿಗೆ ಡಾಕ್ಟರ್‌ಗಳು ಸ್ಪಂದಿಸಿ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

2 mins ago

ಕೊಡಗಿನಲ್ಲಿ ಅಂದಾಜು ೨,೨೭೯ ಹೆಕ್ಟೇರ್ ಬೆಳೆ ಹಾನಿ

ನವೀನ್ ಡಿಸೋಜ ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ೧.೯೩ ಕೋಟಿ ರೂ. ಪರಿಹಾರಕ್ಕೆ ಸರ್ಕಾರಕ್ಕೆ ವರದಿ ಮಡಿಕೇರಿ: ಸಾಮಾನ್ಯವಾಗಿ ಮುಂಗಾರು ಮಳೆಯೊಂದಿಗೆ…

9 mins ago

ದಸರಾ ಗೋಲ್ಡ್ ಕಾರ್ಡ್, ಟಿಕೆಟ್ ಮಾರಾಟ ಶುರು

ಕೆ.ಬಿ.ರಮೇಶ್ ನಾಯಕ ಟಿಕೆಟ್ ಜೀನಿ ಸಂಸ್ಥೆಗೆ ಟಿಕೆಟ್ ಮಾರಾಟದ ಹೊಣೆ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಮೈಸೂರು: ನಾಡಹಬ್ಬ ದಸರಾ…

14 mins ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ; ಲೋಕಾಯುಕ್ತರಿಂದ ತನಿಖೆ?

ಎಸ್.ಎಸ್.ಭಟ್ ನಂಜನಗೂಡು: ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪೂರೈಕೆ ಮಾಡುತ್ತಿರುವ ಶೂಗಳು ಕಳಪೆಯಾಗಿದ್ದು ಅಳತೆಯೂ ಸರಿ ಇಲ್ಲ ಎಂಬ…

18 mins ago

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

17 hours ago