ಮೈಸೂರು

ಕೆ.ಆರ್‌ ನಗರ : ಭತ್ತ,ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ

ಕೆ.ಆರ್‌.ನಗರ : ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಭತ್ತ ಮತ್ತು ರಾಗಿ ಕೇಂದ್ರವನ್ನು ಶಾಸಕ ಡಿ.ರವಿಶಂಕರ್‌ ಉದ್ಘಾಟಿಸಿದರು.

ಪ್ರತಿ ಕ್ವಿಂಟಲ್‌ ಸಾಮಾನ್ಯ ಭತ್ತಕ್ಕೆ 2,300, ಗ್ರೇಡ್-ಎ 2,320ರೂ.ಗಳನ್ನುನಿಗದಿ ಮಾಡಲಾಗಿದ್ದು, ಪ್ರತಿ ಎಕರೆಗೆ ಕನಿಷ್ಠ 25 ರಿಂದ 50 ಕ್ವಿಂಟಲ್ ವರೆಗೆ ಖರೀದಿ ಮಾಡಲಾಗುತ್ತಿದೆ. ಇನ್ನೂ ಕ್ವಿಂಟಲ್ ರಾಗಿಗೆ 4,290 ನಂತೆ 10 ಕ್ವಿಂಟಲ್‌ನಿಂದ 20ರವರೆಗೆ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ನೀಡಿದರು.

ಸರ್ಕಾರ ರಾಗಿ ಮತ್ತು ಭತ್ತ ಸೇರಿದಂತೆ ಇತರ ಬೆಳೆ ಗಳಿಗೆ ಬೆಂಬಲ ಬೆಲೆ ಘೋಷಿಸಿ ಸರ್ಕಾರವೇ ರೈತ ರಿಂದ ನೇರವಾಗಿ ಖರೀದಿ ಮಾಡುತ್ತಿದ್ದು, ಎಲ್ಲ ರೈತ ಬಾಂಧವರು ಇದನ್ನು ಸದುಪಯೋಗಪಡಿಸಿಕೊಳ್ಳ ಬೇಕು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.

ಕೆ ಆರ್ ನಗರ, ಸಾಲಿಗ್ರಾಮ ಮತ್ತು ಚುಂಚನಕಟ್ಟೆಯಲ್ಲಿ ಖರೀದಿ ಕೇಂದ್ರ ತೆರೆಯಲಾಗಿದ್ದು, ರೈತರು ನೇರವಾಗಿ ಖರೀದಿ ಕೇಂದ್ರಕ್ಕೆ ಭತ್ತ ಮತ್ತು ರಾಗಿ ಸರಬರಾಜು ಮಾಡಿ ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಖರೀದಿ ಕೇಂದ್ರದಲ್ಲಿ ಪಡೆದ ರಾಗಿಯನ್ನು ನೇರವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರದಾರರಿಗೆ ವಿತರಿಸುವುದರಿಂದ ಗುಣಮಟ್ಟದ ರಾಗಿಯನ್ನು ಖರೀದಿ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, ಈ ಬಾರಿ ಬೆಳೆದಂತಹ ರಾಗಿಯನ್ನು ಮಾತ್ರ ಪಡೆಯಬೇಕು ಹಣದ ಆಸೆ ಗಾಗಿ ಮಧ್ಯವರ್ತಿಗಳಿಗೆ ಆದ್ಯತೆ ನೀಡಿದ್ದು ಮತ್ತು ಹಳೆ ರಾಗಿ ಖರೀದಿ ಮಾಡಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ತಲೆದಂಡವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಪುರಸಭೆ ಅಧ್ಯಕ್ಷ ಶಿವುನಾಯಕ್, ಸದಸ್ಯ ಕೋಳಿ ಪ್ರಕಾಶ್, ಸೈಯದ್ ಸಿದ್ದಿಕ್, ಮಾಜಿ ಪುರಸಭಾ ಅಧ್ಯಕ್ಷ ನರಸಿಂಹರಾಜು, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಡ್ಡ ಮಹೇಶ್, ಪುರಸಭಾ ಮಾಜಿ ಸದಸ್ಯ ಕೆ. ವಿನಯ್, ಎಪಿಎಂಸಿ ಮಾಜಿ ನಿರ್ದೇಶಕರಾದ ಹಂಪಾಪುರ ಪ್ರಶಾಂತ್, ಹೆಬ್ಬಾಳು ನಾಗೇಂದ್ರ, ಕೆ.ಆರ್. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಹಾದೇವ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ಕಾಂಗ್ರೆಸ್ ವಕ್ತಾರ ಸೈಯದ್ ಜಬೀರ್, ರೈತ ಮುಖಂಡ ಕುಮಾರ್ ಹಾಗೂ ಮತ್ತಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

9 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

31 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

1 hour ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago