ಮೈಸೂರು: ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬಿದ್ದಿದ್ದು ಎಸ್‌ಯುಸಿಐಸಿ (ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್) ಪಕ್ಷದ ಪಿ.ಎಸ್.ಸಂಧ್ಯಾ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಪಕ್ಷದ ಜಿಲ್ಲಾ ಸಮಿತಿಯಿಂದ ರಾಮಸ್ವಾಮಿ ವೃತ್ತದಿಂದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ನಗರಪಾಲಿಕೆ ಕಚೇರಿಯವರೆಗೆ ಮೆರವಣಿಗೆ ನಡೆಸಿದರು.
ಎಸ್‌ಯುಸಿಐಸಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಿ.ರವಿ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿ, ‘ರಾಜಕೀಯ ಹಾಗೂ ರಾಜಕಾರಣಿಗಳೆಂದರೆ ಅಸಹ್ಯ ಪಡುವಂತಹ ಪರಿಸ್ಥಿತಿ ನಮ್ಮ ಮುಂದಿದೆ. ಆದರೆ, ರಾಜಕೀಯವನ್ನು ಜನರ ವಿಮೋಚನೆಗಾಗಿ ಹೋರಾಡುವ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕಿದೆ. ಈ ಕೆಲಸವನ್ನು ನಮ್ಮ ಪಕ್ಷವು ಮಾಡುತ್ತಿದೆ. ಅಧಿಕಾರದ ರಾಜಕೀಯಕ್ಕೆ ಪರ್ಯಾಯವಾಗಿ ಹೋರಾಟದ ರಾಜಕೀಯವನ್ನು ನಮ್ಮ ಪಕ್ಷ ಹಿಂದಿನಿಂದಲೂ ಮಾಡಿಕೊಂಡು ಬಂದಿದೆ’ ಎಂದರು.
‘ಜನ ಹೋರಾಟಗಳ ಮಧ್ಯೆ ಚುನಾವಣೆಗಳು ಬಂದಾಗ ನಮ್ಮ ಪಕ್ಷ ಅದರಲ್ಲೂ ಭಾಗವಹಿಸುತ್ತದೆ. ಒಂದಷ್ಟು ಸೀಟು, ಅಧಿಕಾರ ಗಿಟ್ಟಿಸುವ ತಂತ್ರಗಾರಿಕೆಯ ಭಾಗವಾಗಿ ಚುನಾವಣೆಯನ್ನು ನಾವು ಬಳಸಿಕೊಳ್ಳುವುದಿಲ್ಲ. ಜನ ಹೋರಾಟಗಳ ಪರವಾಗಿ ಸದನದ ಹೊರಗೆ ಮತ್ತು ಒಳಗೆ ದನಿ ಎತ್ತುವುದು ನಮ್ಮ ಪಕ್ಷದ ಪ್ರಮುಖ ಉದ್ದೇಶವಾಗಿದೆ’ ಎಂದು ತಿಳಿಸಿದರು.
‘ಪಕ್ಷದ ಅಭ್ಯರ್ಥಿ ಪಿ.ಎಸ್.ಸಂಧ್ಯಾ 28 ವರ್ಷಗಳಿಂದ ವಿದ್ಯಾರ್ಥಿ, ಯುವಜನ ಹಾಗೂ ಮಹಿಳಾ ಹೋರಾಟಕ್ಕೆ ನೇತೃತ್ವ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರ ಚಳವಳಿಗೆ ನಾಯಕತ್ವ ನೀಡುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಿಂದ ಎಂಎಸ್‌ಡಬ್ಲ್ಯು ಸ್ನಾತಕೋತ್ತರ ಪದವಿ ಪಡೆದು, ಪ್ರಸ್ತುತ ಜನ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಕಾರ್ಮಿಕರು, ಜನಸಾಮಾನ್ಯರು ಹಾಗೂ ರೈತರ ಪರವಾಗಿ ಹೋರಾಡುವ ಅಭ್ಯರ್ಥಿಗಳನ್ನು ಜನರು ಬೆಂಬಲಿಸಬೇಕು’ ಎಂದು ಕೋರಿದರು.
‘ಜನಸಾಮಾನ್ಯರ ಜೀವನ ಸುಧಾರಣೆಗಾಗಿ ಮತದಾರರು ನನ್ನನ್ನು ಬೆಂಬಲಿಸಬೇಕು’ ಎಂದು ಸಂಧ್ಯಾ ಮನವಿ ಮಾಡಿದರು.
ಜಿಲ್ಲಾ ಸಮಿತಿಯ ಎಂ.ಉಮಾದೇವಿ, ಚಂದ್ರಶೇಖರ ಮೇಟಿ, ವಿ.ಯಶೋಧರ, ಸೀಮಾ ಜಿ.ಎಸ್., ಹರೀಶ್, ಸುನೀಲ್, ಸುಮಾ, ಸುಭಾಷ್, ಚಂದ್ರಕಲಾ, ಪುಷ್ಪಾ, ಅಭಿಲಾಷ ಮತ್ತು ನೀತು ಇದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…