ಮೈಸೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಹಳೆ ಮೈಸೂರು ಭಾಗದ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 17,894 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 13,359 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 122.90 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 46.835 ಟಿಎಂಸಿ ನೀರು ಸಂಗ್ರಹವಾಗಿದೆ.
ಇನ್ನು ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ.
ಜಲಾಶಯದ ಇಂದಿನ ಒಳಹರಿವು 10,995 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 12,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 81 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದೆ.





