ಮೈಸೂರು

ಕೆಆರ್‌ಎಸ್‌ ಅಣೆಕಟ್ಟೆ ನಿರ್ಮಾತೃ ವಿವಾದ : ಸಚಿವ ಎಚ್‌ಸಿಎಂ ಹೇಳಿಕೆ ತಿರುಚುವು ಹುನ್ನಾರ ನಡೆದಿದೆ ; ಪುರುಷೊತ್ತಮ್‌ ಆರೋಪ

ಮೈಸೂರು : ಕೆಆರ್‌ಎಸ್ ಅಣೆಕಟ್ಟೆಗೆ ಅಡಿಗಲ್ಲು ಹಾಕಿದ ವಿಚಾರದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಸತ್ಯಕ್ಕೆ ಹತ್ತಿರವಾಗಿದೆ. ಆದರೆ, ಹೇಳಿಕೆಯನ್ನು ತಿರುಚಿ ವಿವಾದ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮಹಾಪೌರ ಪುರುಷೋತ್ತಮ್ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಎಚ್.ಸಿ.ಮಹದೇವಪ್ಪ ಅವರು ಕೆ.ಆರ್.ಎಸ್ ಅಣೆಕಟ್ಟೆಗೆ ಟಿಪ್ಪು ಅಡಿಗಲ್ಲು ಹಾಕಿದ್ದಾರೆ ಎಂದು ಅವರ ಸಾಧನೆ ಬಗ್ಗೆ ಹೇಳಿದ್ದಾರೆ. ಇತಿಹಾಸದ ಸತ್ಯವನ್ನು ಒಪ್ಪಿಕೊಳ್ಳಬೇಕು. ಇದಕ್ಕೆ ಸಾಕ್ಷಿಯೂ ಇದೆ ಎಂದರು.

1911 ರ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡುವ ವೇಳೆ ಟಿಪ್ಪು ಸುಲ್ತಾನರ ಅಡಿಗಲ್ಲು ಸಿಕ್ಕಿದೆ. ಅದನ್ನು ಕೂಡ ಅಣೆಕಟ್ಟೆ ಬಳಿ ಸ್ಥಾಪನೆ ಮಾಡಿದ್ದಾರೆ. ಕೆಆರ್‌ಎಸ್ ನಿರ್ಮಾತೃ ನಾಲ್ವಡಿಯವರೇ ಎಂಬುದರಲ್ಲಿ ಎರಡು ಮಾತಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅತೀ ಹೆಚ್ಚು ಗೌರವ ಕೊಡುವುದು ದಲಿತ ಸಮುದಾಯ. ಮಹದೇವಪ್ಪ ಅವರು ನಾಲ್ವಡಿ ವಿರುದ್ಧ, ರಾಜಮನೆತನದವರ ವಿರುದ್ಧ ಮಾತನಾಡಿಲ್ಲ. ಹೀಗಾಗಿ ಮುಸ್ಲಿಂ ಸಮುದಾಯದ ಓಲೈಕೆಗಾಗಿ ಮಾತನಾಡಿದ್ದಾರೆ ಎಂಬುದು ಸುಳ್ಳು. ಕೂಡಲೇ ಇಂತಹ ವಿವಾದ ಸೃಷ್ಟಿಸುವ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ವಿಶ್ವೇಶ್ವರಯ್ಯ ಇಂಜಿನಿಯರ್ ಅಷ್ಟೇ
ಕೆಆರ್‌ಎಸ್ ಅಣೆಕಟ್ಟೆ ಬಳಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಮಾನವಾಗಿ ವಿಶ್ವೇಶ್ವರಯ್ಯ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಮೊದಲು ಆ ಪ್ರತಿಮೆಯನ್ನು ತೆಗೆಯಬೇಕು. ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸರಿ ಸಮಾನವೇ? ವಿಶ್ವೇಶ್ವರಯ್ಯ ಅವರು ಒಬ್ಬ ಇಂಜಿನಿಯರ್ ಅಷ್ಟೇ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ಸಚಿವ ಎಚ್.ಸಿ.ಮಹದೇವಪ್ಪ ಟಿಪ್ಪು ಸುಲ್ತಾನ್ ಕೆಆರ್‌ಎಸ್ ಅಣೆಕಟ್ಟೆ ಕಟ್ಟಲು ಶಂಕುಸ್ಥಾಪನೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಅಷ್ಟೇ. ಕನ್ನಂಬಾಡಿ ಕಟ್ಟೆಗೆ ಹೋಗಿ ನೋಡಿ ಗೇಟಿನ ಒಳ ಭಾಗದಲ್ಲಿ 3 ಕಲ್ಲುಗಳಿವೆ. ಒಂದು ಅರೇಬಿಕ್, ಒಂದು ಇಂಗ್ಲಿಷ್, ಒಂದು ಕನ್ನಡದಲ್ಲಿ ಇದೆ. ಅದರಲ್ಲಿ ಭಗವಂತನ ಕರುಣೆಯಿಂದ ಆಣೆಕಟ್ಟೆ ಕಟ್ಟಿಸಲು ಹೊರಟಿದ್ದೇನೆ, ಶಂಕುಸ್ಥಾಪನೆ ಮಾಡಿದ್ದೇನೆ ಎಂದು ಬರೆದಿದೆ ಎಂದರು.

ಇತಿಹಾಸವನ್ನು ಅರಿಯದೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಟಿಪ್ಪು ತನ್ನ ಆಡಳಿತದಲ್ಲಿ ಎಲ್ಲ ಸಮುದಾಯದ ಪರವಾಗಿದ್ದರು. ಒಂದು ವೇಳೆ ಮತಾಂಧನಾಗಿದ್ದರೆ ಶ್ರೀರಂಗಪಟ್ಟಣದಲ್ಲಿ ಎಲ್ಲರೂ ಮುಸ್ಲಿಮರಾಗಿ ಪರಿವರ್ತನೆ ಆಗಿರಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದರು.

ಚಿತ್ರಗೀತೆಯೊಂದರಲ್ಲಿ ಡಾ.ರಾಜಕುಮಾರ್ ಅವರಿಂದ ‘ಕಾವೇರಿಯನ್ನು ಹರಿಯಲು ಬಿಟ್ಟು ವಿಶ್ವೇಶ್ವರಯ್ಯ ಶ್ರಮ ಪಡದಿದ್ದರೆ’ ಎಂದು ಹಾಡಿಸಿದ್ದಾರೆ. ಇದು ಸಮಾಜಕ್ಕೆ ತಪ್ಪು ಸಂದೇಶ ನೀಡುವ ಸಾಲುಗಳು. ಇದರಿಂದ ಕನ್ನಂಬಾಡಿ ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅವಮಾನ ಮಾಡಿದಂತೆ. ಏಕೆಂದರೆ ಅಣೆಕಟ್ಟೆ ಕಟ್ಟುವಾಗ ವಿಶ್ವೇಶ್ವರಯ್ಯ ಒಂದು ವರ್ಷ ಮಾತ್ರ ಇದ್ದರು. ಕನ್ನಂಬಾಡಿ ಕಟ್ಟೆ ಕಟ್ಟಲು 21 ವರ್ಷಗಳು ಬೇಕಾಯಿತು ಎಂದು ವಿವರಿಸಿದರು.

ಲೇಖಕ ಸಿದ್ದಸ್ವಾಮಿ ಮಾತನಾಡಿ, ಕೆಆರ್‌ಎಸ್ ಅಣೆಕಟ್ಟೆ ನಿರ್ಮಾಣದಲ್ಲಿ ನಾಲ್ವಡಿ ಅವರೊಂದಿಗೆ ಶ್ರಮಿಸಿದವರು ಮಿರ್ಜಾ ಇಸ್ಮಾಯಿಲ್ ಹೊರತು ವಿಶ್ವೇಶ್ವರಯ್ಯ ಅಲ್ಲ ಎಂದರು. ಪತ್ರಕರ್ತ ಸೋಮಯ್ಯ ಮಲೆಯೂರು, ದಸಂಸ ಜಿಲ್ಲಾ ಸಂಚಾಲಕ ಭುಗತಗಳ್ಳಿ ಮಣಿಯಯ್ಯ, ದಲಿತ ಮುಖಂಡ ಪುಟ್ಟರಾಜು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

48 mins ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

59 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

2 hours ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

2 hours ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

3 hours ago