ಮೈಸೂರು

ಮಾಹಿತಿ ನೀಡದ ಕೆಎಸ್‌ಒಯು: ಮುಕ್ತ ವಿವಿ ಕುಲಪತಿಗೆ ಮಾಹಿತಿ ಆಯೋಗ ನೋಟಿಸ್

ಮೈಸೂರು: ಆರ್‌ಟಿಐ ಅರ್ಜಿದಾರರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದಿರುವ ಕಾರಣ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಮತ್ತು ಕುಲಸಚಿವರು ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗ ನೋಟಿಸ್‌ ನೀಡಿದೆ.

ಯಾವುದೇ ಪ್ರತಿನಿಧಿ ಕಳುಹಿಸದೇ ನಂ.6 ರಂದು ನೇರವಾಗಿ ವಿಚಾರಣೆಗೆ ಕುಲಪತಿ ಮತ್ತು ಕುಲಸಚಿವರೇ ಹಾಜರಾಗುವಂತೆ ರಾಜ್ಯ ಮಾಹಿತಿ ಆಯೋಗವು  ಹೇಳಿದೆ. ಕುಲಪತಿಯೊಬ್ಬರಿಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿರುವುದು ಇದೇ ಮೊದಲು ಎನ್ನಲಾಗಿದೆ.

ಇಲ್ಲಿನ ವಿಜಯನಗರದ ನಿವಾಸಿ ಆರ್.‌ಎನ್‌.ಸತ್ಯನಾರಾಯಣ ಎಂಬುವವರು 2024ರ ಮೇ.6ರಂದು, ಆರ್‌ಟಿಐ ಅಡಿಯಲ್ಲಿ ಕುಲಸಚಿವರ ವಿಭಾಗಕ್ಕೆ 2023ರ ಜ.10ರಿಂದ ಜ.20ರವರೆಗೆ ಬಂದಿರುವ ಅಂಚೆ ಅಥವಾ ಖುದ್ದಾಗಿ ಬಂದ ಪತ್ರಗಳ ಸ್ವೀಕೃತಿಯ ದಾಖಲಾತಿ ಪುಸ್ತಕದ ದೃಢೀಕೃತ ಪ್ರತಿಗಳನ್ನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿದಾರರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವೂ ಯಾವ ಉತ್ತರವನ್ನು ನೀಡಿರಲಿಲ್ಲ.

ಅರ್ಜಿದಾರರು 2024ರ ಜುಲೈ 7ರಂದು ಮಾಹಿತಿಯನ್ನು ಕಾಲಮಿತಿಯಲ್ಲಿ ನೀಡದೆ ಕಚೇರಿಗೆ ಅಲೆದಾಡಿಸಿದ್ದಾರೆಂದು ಮೇಲ್ಮನವಿ ಪ್ರಾಧಿಕರಕ್ಕೆ ದೂರು ಸಲ್ಲಿಸಿದ್ದರು. ಬಳಿಕ ವಿಶ್ವವಿದ್ಯಾನಿಲಯದವರು ಈ ಬಗ್ಗೆ ಮಾಹಿತಿ ನೀಡಲು ಆಗುವುದಿಲ್ಲವೆಂಬಂತೆ ತಿಳಿಸಿದ್ದರು. ಆದರೆ, ವಿವಿ ಅವರು ಯಾವ ನಿಯಮದಡಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂಬುದನ್ನು ಹೇಳಿರಲಿಲ್ಲ. ಹೀಗಾಗಿ ಇದನ್ನು ಪ್ರಶ್ನಿಸಿ ಸತ್ಯನಾರಾಯಣ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ಆಧಾರದ ಮೇರೆಗೆ ರಾಜ್ಯ ಮಾಹಿತಿ ಆಯೋಗವೂ ಕುಲಪತಿ ಹಾಗೂ ಕುಲಸಚಿವರಿಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ಜೊತೆಗೆ ಸಾರ್ಜನಿಕ ಮಾಹಿತಿ ಅಧಿಕಾರಿಯ ಹೆಸರು ಹಾಗೂ ವಿಳಾಸವನ್ನು ಕಡ್ಡಾಯವಾಗಿ ತರುವಂತೆಯೂ ಸೂಚಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago