ಮೈಸೂರು : ವೇಗವಾಗಿ ಬಂದು ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ನಡೆದಿದೆ. ಪರಿಣಾಮ ಬಸ್ ನಲ್ಲಿದ್ದ ೨೫ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಜಿಲ್ಲೆಯ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವರಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






