ಮೈಸೂರು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌ ; ೨೦ಕ್ಕೂ ಹೆಚ್ಚು ಮಂದಿಗೆ ಗಾಯ

ಮೈಸೂರು : ವೇಗವಾಗಿ ಬಂದು ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ ಆರ್‌ ಟಿಸಿ ಬಸ್‌  ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ನಡೆದಿದೆ. ಪರಿಣಾಮ ಬಸ್‌ ನಲ್ಲಿದ್ದ ೨೫ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ಚಾಲಕ ಸೇರಿ ಮೂವರ ಸ್ಥಿತಿ ಗಂಭೀರವಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಜಿಲ್ಲೆಯ ಕೆ ಆರ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವರಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

4 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

4 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

5 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

6 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

6 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 hours ago