ಎಚ್.ಡಿ.ಕೋಟೆ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಬಳಿ ನಡೆದಿದೆ.
ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ತಡೆ ರಹಿತ ಬಸ್ಸೊಂದು ವೇಗವಾಗಿ ಬಂದು ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನೂ ಓದಿ:- ಬೈಕ್ ಲಾರಿ ಡಿಕ್ಕಿ: ಪತ್ನಿ ಸ್ಥಳದಲ್ಲೇ ಸಾವು
ಮೃತಪಟ್ಟ ವ್ಯಕ್ತಿಯ ಶವವನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಬಸ್ ಗಳನ್ನು ಮುಂದೆ ಬಿಡದೇ ತಡೆದು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ.
ಪರಿಣಾಮ ಕಿಲೋ ಮೀಟರ್ ಗಟ್ಟಲೇ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





