ಮೈಸೂರು: ಬ್ರೇಕ್ ಫೇಲ್ಯೂರ್ ಆಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೈಸೂರಿನ ಚಿಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೈಸೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಬಸ್ ಇದಾಗಿದ್ದು, ಏಕಾಏಕಿ ಬ್ರೇಕ್ ಫೇಲ್ಯೂರ್ ಆದ ಕಾರಣ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಕರೆಂಟ್ ಇಲ್ಲದ ಪರಿಣಾಮ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಸೆಸ್ಕ್ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ.





