ಮೈಸೂರು: ಬ್ರೇಕ್ ಫೇಲ್ಯೂರ್ ಆಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೈಸೂರಿನ ಚಿಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೈಸೂರಿನಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಬಸ್ ಇದಾಗಿದ್ದು, ಏಕಾಏಕಿ ಬ್ರೇಕ್ ಫೇಲ್ಯೂರ್ ಆದ ಕಾರಣ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಕರೆಂಟ್ ಇಲ್ಲದ ಪರಿಣಾಮ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಸೆಸ್ಕ್ ಅಧಿಕಾರಿಗಳು ಪರಿಶೀಲನೆ ನಡೆಸಿ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ.
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…
ಟೆಹರಾನ್: ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ: ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…