ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.





