KSRTC bus tire blast: More than ten passengers injured
ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ.
ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ ಶಾಯಿದಬಾನು ಎಂಬುವವರು ಗಂಭೀರ ಗಾಯಗೊಂಡಿದ್ದಾರೆ.
ಬೇಗೂರಿನಿಂದ ಹೆಡಿಯಾಲ ಮಾರ್ಗವಾಗಿ ಎಚ್.ಡಿ.ಕೋಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.
ಹೆಡಿಯಾಲ ಗ್ರಾಮದ ಗ್ರಾಪ ಮಾಜಿ ಅಧ್ಯಕ್ಷ ನೇಮತ್ ಉಲ್ಲಾಖಾನ್ ಮತ್ತು ಸ್ನೇಹಿತರು ಗಾಯಗೊಂಡ ಪ್ರಯಾಣಿಕರನ್ನು ಖಾಸಗಿ ಆಸ್ಪತ್ರೆ ಹಾಗೂ ಸರಗೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸಾರಿಗೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗುಜರಿಗೆ ಹಾಕುವ ಸಾರಿಗೆ ಬಸ್ಸುಗಳನ್ನು ರಸ್ತೆಗೆ ಇಳಿಸಲಾಗಿದೆ. ಹೆಡಿಯಾಲ ಗಡಿ ಭಾಗವಾಗಿರುವ ದೆಸೆಯಿಂದ ದಿನನಿತ್ಯ ಸರ್ಕಾರಿ ಬಸ್ಸುಗಳು ಕೆಟ್ಟು ನಿಲ್ಲುತ್ತಿವೆ. ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣ ಮಾಡಿರುವ ದೆಸೆಯಿಂದ ಅತಿ ಹೆಚ್ಚು ಮಹಿಳಾ ಪ್ರಯಾಣಿಕರೇ ಸಂಚರಿಸುತ್ತಿದ್ದಾರೆ. ಸಾರಿಗೆ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉತ್ತಮ ಸುಸಜ್ಜಿತ ಬಸ್ಸುಗಳನ್ನು ಕಲ್ಪಿಸಬೇಕಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಘಟನೆ ಪ್ರತ್ಯಕ್ಷದರ್ಶಿ ನೇಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…