ಮೈಸೂರು

ಕುಕ್ಕರಹಳ್ಳಿ ಕೆರೆ ಮಾರ್ಗದಲ್ಲಿ ಸಂಚರಿಸುವ ಸವಾರರೇ ದಯವಿಟ್ಟು ಗಮನಿಸಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಮಾರ್ಗದಲ್ಲಿ ಸಂಚರಿಸುವವರು ಇಂದು (ಜೂನ್‌.25) ಬದಲಿ ಮಾರ್ಗ ಅನುಸರಿಸುವುದು ಒಳ್ಳೆಯದು. ಕುಕ್ಕರಹಳ್ಳಿ ಕೆರೆಯಿಂದ ಬೋಗಾಧಿ ಮಾರ್ಗವಾಗಿ ಸಂಚರಿಸುವ ರಸ್ತೆಗೆ ಡಾಂಬರೀಕರಣ ಕಾರ್ಯ ನಡೆಯುತ್ತಿದ್ದು, ಸವಾರರು ಬದಲಿ ಮಾರ್ಗವನ್ನು ಅನುಸರಿಸುವುದು ಒಳಿತಾಗಿದೆ.

ಇದನ್ನೂ ಓದಿ: ನನ್ನ ಹನಿಟ್ರ್ಯಾಪ್‌ ನಡೆದಿಲ್ಲ, ಪರಿಚಿತರನ್ನು ಬ್ಲಾಕ್‌ ಮೇಲ್‌ ಮಾಡಿದ್ದಾರೆ: ಹರೀಶ್‌ಗೌಡ ಸ್ಪಷ್ಟನೆ; https://andolana.in/state/harish-gowda-react-honeytrap/

ಮಂಗಳವಾರ ಮುಂಜಾನೆಯಿಂದಲೆ ರಸ್ತೆಯನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿದ್ದು, ಅದರ ಬದಲಿ ಮಾರ್ಗವನ್ನಾಗಿ ಸರಸ್ವತಿ ಪುರಂ ರಸ್ತೆಯನ್ನು ಸವಾರರು ಬಳಸಿಕೊಳ್ಳಬಹುದಾಗಿದೆ. ಬೆಳಗಿನಿಂದಲೇ ಬಸ್‌ ಸಂಚಾರ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳ ಓಟಾಟ ಹೆಚ್ಚಾಗಿರುವುದು ಕಂಡು ಬಂದಿದ್ದು, ಟ್ರಾಫಿಕ್‌ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬಯಸುವವರು ಕುಕ್ಕರಹಳ್ಳಿ ಕೆರೆಯಿಂದ ಬೋಗಾದಿ ಮಾರ್ಗದ ರಸ್ತೆ ಅನುಸರಿಸದೇ ಇರುವುದು ಒಳ್ಳೆಯದಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

20 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

38 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

1 hour ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago