ಮೈಸೂರು

ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ: ಕುಮಾರ್‌ಗೌಡ

ಮೈಸೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಮತು ಮೈಸೂರು ನಗರ ಮೂಡಾ ಹಗರಣದ ವಿಚಾರಗಳನ್ನು ತೆಗೆದುಕೊಂಡು ಕಳೆದ 2 ತಿಂಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಆರೋಪ- ಪ್ರತ್ಯಾರೋಪ ಮಡುತ್ತಾ ಕಾಲ ಕಳೆಯುತ್ತಿವೆ ಹೊರತು ಈವರೆಗೆ ಕಾನೂನು ಕ್ರಮಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಇದು ಹೀಗೆ ಮುಂದುವರಿದರೆ ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಮೈಸೂರು ರಕ್ಷಣಾ ವೇದಿಕೆ ಉಪಾಧ್ಯಕ್ಷ ಕುಮಾರ್‌ಗೌಡ ಆಕ್ರೋಶ ಹೊರಹಾಕಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿನ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಅವರ ಮೇಲಿರುವ ಗೌರವದಿಂದ ಅಲ್ಲ. ಬದಲಾಗಿ ದೊಡ್ಡವರನ್ನು ಈ ಹಗರಣಗಳಲ್ಲಿ ಸಿಲುಕಿ ಕೊಂಡರೆ ಅಥವಾ ಶಾಮೀಲು ಮಾಡಿಕೊಂಡರೆ ಸಣ್ಣ-ಪುಟ್ಟ ಅವರವರ ವ್ಯವಹಾರಗಳನ್ನು ಅಥವಾ ಧಂಧೆಗಳನ್ನು ಸುಲಭವಾಗಿ ಮಾಡಿಕೊಳ್ಳಬಹುದು ಎಂಬ ದೂರದೃಷ್ಠಿಯಿಂದ ಹಾಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರಲುಬಹುದು ಎಂದು ಸಂದೇಹ ಹೊರ ಹಾಕಿದರು.

ವಿರೋಧ ಪಕ್ಷಗಳು ಪ್ರಾಧಿಕಾರದ ಹಗರಣವನ್ನು ಬಯಲಿಗಳೆಯದೆ ಕೇವಲ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ವಿರೋಧ ಪಕ್ಷಗಳ ಸಣ್ಣತನ ಮತ್ತು ರಾಜಕೀಯ ಮೇಲಾಟ ಕಾಣಿಸುತ್ತಿದೆ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.

ಮುಡಾ ಹಗರಣ ಸಂಬಂಧಿಸಿದಂತೆ ಅಧಿಕಾರಗಳ ಮೇಲೆ ಲೋಕಾಯುಕ್ತ ಸೇರಿದಂತೆ ಆಯಾಯ ಇಲಾಖೆಗಳಿಗೆ ದೂರು ಸಲ್ಲಿಸಿ, ಕ್ರಮಕೈಗೊಳ್ಳುವಂತೆ ದೂರು ನೀಡುತ್ತೇವೆ. ಒಂದು ವೇಲೆ ಈ ಭ್ರಷ್ಟರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ನಮ್ಮ ವೇದಿಕೆಯು ನ್ಯಾಯಾಲಯದ ಮೆಟ್ಟಿಲೇರಲು ಸಿದ್ದರಿದ್ದೇವೆ ಎಂದು ಆಡಳಿತ ಪಕ್ಷಕ್ಕೆ ತಿಳಿಸಿದರು.

ಈ ಮೂಡಾ ಹಗರಣದಲ್ಲಿ ನೇರ ಪಾತ್ರಧಾರಿಗಳಾಗಿರುವ ಇಬ್ಬರು ಆಯುಕ್ತರನ್ನು ಈ ಕೂಡಲೇ ಅಮಾನತ್ತಿನಲ್ಲಿ ಇಡಬೇಕು ಅಥವಾ ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸುತ್ತೇವೆ. ಸರ್ಕಾರ ನೇಮಿಸಿರುವ ತನಿಖಾ ಸಂಸ್ಥೆ ವರದಿ ನೀಡುವ ತನಕ ಈ ಅಧಿಕಾರಿಗಳಿಗೆ ವೇತನ ನೀಡದಂತೆ ಹಾಗೂ ಯಾವುದೇ ರೀತಿಯ ಸ್ಥಳ ನಿಯೋಜನೆ ಮಾಡಬಾರದೆಂದು ಒತ್ತಾಯಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

2 mins ago

ಜನರೊಂದಿಗೆ ಜನತಾದಳ ಸಮಾವೇಶಕ್ಕೆ ಭರ್ಜರಿ ಸಿದ್ಧತೆ

ಮಂಜು ಕೋಟೆ ಇಂದು ಕೋಟೆಯಲ್ಲಿ ಸಮಾವೇಶ; ಬೃಹತ್ ವೇದಿಕೆ ನಿರ್ಮಾಣ; ಸಾವಿರಾರು ಜನರು ಸೇರುವ ನಿರೀಕ್ಷೆ; ಶಕ್ತಿ ಪ್ರದರ್ಶನಕ್ಕೆ ಮುಂದಾದ…

7 mins ago

ವರ್ತುಲ ರಸ್ತೆಯಲ್ಲಿ ಸ್ವಚ್ಛತಾ ಅಭಿಯಾನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ…

11 mins ago

ಮಕ್ಕಳ ಮನಸ್ಸಿಗೆ ರೆಕ್ಕೆ ಕಟ್ಟಿದ ರಂಗಭೂಮಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…

15 mins ago

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

12 hours ago