ಮೈಸೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣ ಮತು ಮೈಸೂರು ನಗರ ಮೂಡಾ ಹಗರಣದ ವಿಚಾರಗಳನ್ನು ತೆಗೆದುಕೊಂಡು ಕಳೆದ 2 ತಿಂಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಆರೋಪ- ಪ್ರತ್ಯಾರೋಪ ಮಡುತ್ತಾ ಕಾಲ ಕಳೆಯುತ್ತಿವೆ ಹೊರತು ಈವರೆಗೆ ಕಾನೂನು ಕ್ರಮಕ್ಕೆ ಪ್ರಾಮುಖ್ಯತೆ ನೀಡಿಲ್ಲ. ಇದು ಹೀಗೆ ಮುಂದುವರಿದರೆ ಮುಡಾ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ಮಾಡಲಾಗುವುದು ಎಂದು ಮೈಸೂರು ರಕ್ಷಣಾ ವೇದಿಕೆ ಉಪಾಧ್ಯಕ್ಷ ಕುಮಾರ್‌ಗೌಡ ಆಕ್ರೋಶ ಹೊರಹಾಕಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿನ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರುವುದು ಸಿದ್ದರಾಮಯ್ಯ ಅವರ ಮೇಲಿರುವ ಗೌರವದಿಂದ ಅಲ್ಲ. ಬದಲಾಗಿ ದೊಡ್ಡವರನ್ನು ಈ ಹಗರಣಗಳಲ್ಲಿ ಸಿಲುಕಿ ಕೊಂಡರೆ ಅಥವಾ ಶಾಮೀಲು ಮಾಡಿಕೊಂಡರೆ ಸಣ್ಣ-ಪುಟ್ಟ ಅವರವರ ವ್ಯವಹಾರಗಳನ್ನು ಅಥವಾ ಧಂಧೆಗಳನ್ನು ಸುಲಭವಾಗಿ ಮಾಡಿಕೊಳ್ಳಬಹುದು ಎಂಬ ದೂರದೃಷ್ಠಿಯಿಂದ ಹಾಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ನಿವೇಶನ ಮಂಜೂರು ಮಾಡಿರಲುಬಹುದು ಎಂದು ಸಂದೇಹ ಹೊರ ಹಾಕಿದರು.
ವಿರೋಧ ಪಕ್ಷಗಳು ಪ್ರಾಧಿಕಾರದ ಹಗರಣವನ್ನು ಬಯಲಿಗಳೆಯದೆ ಕೇವಲ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದು ವಿರೋಧ ಪಕ್ಷಗಳ ಸಣ್ಣತನ ಮತ್ತು ರಾಜಕೀಯ ಮೇಲಾಟ ಕಾಣಿಸುತ್ತಿದೆ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.
ಮುಡಾ ಹಗರಣ ಸಂಬಂಧಿಸಿದಂತೆ ಅಧಿಕಾರಗಳ ಮೇಲೆ ಲೋಕಾಯುಕ್ತ ಸೇರಿದಂತೆ ಆಯಾಯ ಇಲಾಖೆಗಳಿಗೆ ದೂರು ಸಲ್ಲಿಸಿ, ಕ್ರಮಕೈಗೊಳ್ಳುವಂತೆ ದೂರು ನೀಡುತ್ತೇವೆ. ಒಂದು ವೇಲೆ ಈ ಭ್ರಷ್ಟರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿದ್ದಲ್ಲಿ ನಮ್ಮ ವೇದಿಕೆಯು ನ್ಯಾಯಾಲಯದ ಮೆಟ್ಟಿಲೇರಲು ಸಿದ್ದರಿದ್ದೇವೆ ಎಂದು ಆಡಳಿತ ಪಕ್ಷಕ್ಕೆ ತಿಳಿಸಿದರು.
ಈ ಮೂಡಾ ಹಗರಣದಲ್ಲಿ ನೇರ ಪಾತ್ರಧಾರಿಗಳಾಗಿರುವ ಇಬ್ಬರು ಆಯುಕ್ತರನ್ನು ಈ ಕೂಡಲೇ ಅಮಾನತ್ತಿನಲ್ಲಿ ಇಡಬೇಕು ಅಥವಾ ಕಡ್ಡಾಯ ರಜೆಯ ಮೇಲೆ ಮನೆಗೆ ಕಳುಹಿಸಬೇಕೆಂದು ಒತ್ತಾಯಿಸುತ್ತೇವೆ. ಸರ್ಕಾರ ನೇಮಿಸಿರುವ ತನಿಖಾ ಸಂಸ್ಥೆ ವರದಿ ನೀಡುವ ತನಕ ಈ ಅಧಿಕಾರಿಗಳಿಗೆ ವೇತನ ನೀಡದಂತೆ ಹಾಗೂ ಯಾವುದೇ ರೀತಿಯ ಸ್ಥಳ ನಿಯೋಜನೆ ಮಾಡಬಾರದೆಂದು ಒತ್ತಾಯಿಸಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…