ಮೈಸೂರು

ಪ್ರಜ್ವಲ್ ಪ್ರಕರಣ ದುರ್ಬಲಗೊಳಿಸಲು ‌ ಕುಮಾರಸ್ವಾಮಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣವನ್ನು  ದುರ್ಬಲಗೊಳಿಸಲು ಎಚ್.ಡಿ ಕುಮಾರಸ್ವಾಮಿ ಅವರು ಡಿ.ಕೆ ಶಿವಕುಮಾರ್‌ ಹಾಗೂ  ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಇಂದು (ಮೇ.24) ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಆಡಿಯೋ ಇರುವುದರಿಂದ ಅವರನ್ನೇ ವಿಚಾರಣೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಮಾಡಿರುವ ಬಗ್ಗೆ ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕುಮಾರಸ್ವಾಮಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.

ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ ಎಂದರು. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹಾಗಂತ ನಂಬಿರುವುದೇ ನಿಮ್ಮ ತಪ್ಪು. ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ ಎಂದರು.

ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದರು.

ಚುನಾವಣಾ ಫಲಿತಾಂಶಕ್ಕಾಗಿ ಇದನ್ನು ವಿಳಂಬ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಪ್ರಶ್ನೆಯನ್ನು ಬಿಜೆಪಿಯ ಪ್ರಹ್ಲಾದ್ ಜೋಶಿ ಅವರನ್ನು ಕೇಳಿ ಎಂದರು.

ದೇವೇಗೌಡರು ಪ್ರಜ್ವಲ ರೇವಣ್ಣ ಅವರನ್ನು ಕುಟುಂಬದಿಂದ ಹೊರಹಾಕುತ್ತೇವೆ ಎಂದಿರುವ ಬಗ್ಗೆ ಮಾತನಾಡಿ ಇವರಿಗೆ ಗೊತ್ತಿಲ್ಲದೆ ಪ್ರಜ್ವಲ ರೇವಣ್ಣ ಹೊರಟು ಹೋಗಿದ್ದಾರಾ? ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ನನ್ನ ಮಗ ಎಂದು ಮತ ನೀಡಲು ಪ್ರಚಾರ ಮಾಡಿದ್ದು ಸಂಪರ್ಕವೂ, ಅಲ್ಲವೋ ಎಂದು ಪ್ರಶ್ನಿಸಿದರು.

ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಸ್.ಐ.ಟಿ ರಚನೆ;
ಎಸ್.ಐ.ಟಿ ತನಿಖೆ ತಾತ್ವಿಕ ಅಂತ್ಯ ಪಡೆಯುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ .ಐ.ಟಿ ಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್.ಐ.ಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದರು.

ಪರಿಶೀಲನೆ;
ಕಾವೇರಿ ನದಿ ಮಲಿನವಾಗುತ್ತಿದೆ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲವು ಕಡೆ ಕೈಗಾರಿಕೆಗಳಿಂದ ಬಿಡುವ ನೀರಿನಿಂದ ಮಲಿನವಾಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago