ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸುತ್ತೂರು ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಜತೆ ಮಾತನಾಡಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಎಂದು ಯೋಗಿ ಆದಿತ್ಯನಾಥ್ ಅವರಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.
ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ ಎಂದು ಸಚಿವರು ನೋವು ವ್ಯಕ್ತಪಡಿಸಿದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…