ಮೈಸೂರು

ಕುಂಭಮೇಳ: ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿ ಸೂಚಿಸಿದ್ದಾರೆ ಎಂದ HD ಕುಮಾರಸ್ವಾಮಿ

ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಸುತ್ತೂರು ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ ಹಿಂದೂ ಧರ್ಮದಲ್ಲಿ ಶ್ರೇಷ್ಠವಾದ ದಿನ ಎನ್ನುವ ಭಾವನೆ ಎಲ್ಲರಿಗೂ ಇದೆ. ಅದಕ್ಕಾಗಿ ಅಲ್ಲಿ ಪುಣ್ಯಸ್ನಾನ ಮಾಡಿದರೆ ಒಳ್ಳೆಯದು ಎನ್ನುವ ಭಾವನೆ ಜನರಲ್ಲಿದೆ. ಅದಕ್ಕಾಗಿ ದಾಖಲೆ ಪ್ರಮಾಣದಲ್ಲಿ ಜನ ಹೋಗಿದ್ದಾರೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಸರಕಾರ ತೆಗೆದುಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರ ಜತೆ ಮಾತನಾಡಿದ್ದಾರೆ. ದೊಡ್ಡ ಮಟ್ಟದ ಮುಂಜಾಗ್ರತಾ ಕ್ರಮ ವಹಿಸಿ ಎಂದು ಯೋಗಿ ಆದಿತ್ಯನಾಥ್‌ ಅವರಿಗೆ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು.

ಕುಂಭಮೇಳದಲ್ಲಿ ಅದ್ಭುತವಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಬಂದಿದ್ದು ಸಮಸ್ಥೆಗೆ ಕಾರಣವಾಗಿದೆ. ಮೌನಿ ಅಮಾವಾಸ್ಯೆ ದಿನ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡುತ್ತಾರೆ. ಹೀಗಾಗಿ ಪರಿಸ್ಥಿತಿಯನ್ನು ನೋಡಿಕೊಂಡು ಬನ್ನಿ ಎಂದು ಕುಂಭಮೇಳ ಸಮಿತಿ ಜನತೆಗೆ ಮನವಿ ಮಾಡಿತ್ತು. ಆದರೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿರುವಾಗ ಈ ಘಟನೆ ನಡೆದಿದೆ ಎಂದು ಸಚಿವರು ನೋವು ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

12 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

13 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

13 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

13 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

16 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

22 hours ago