ಮೈಸೂರು

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು ಕಾರ್ಯಕ್ರಮವನ್ನು ತಡೆದು ಕ್ರಮಕ್ಕೆ ಮುಂದಾಗಿದ್ದಾರೆ.

ಹತ್ತನೇ ತರಗತಿ ಉತ್ತೀರ್ಣಳಾದ 15 ವರ್ಷ ಪ್ರಾಯದ ಬಾಲಕಿಗೆ ಪಿರಿಯಾಪಟ್ಟಣದ ಯುವಕ ನೊಂದಿಗೆ ಕುಟುಂಬಸ್ಥರು ನಿಶ್ಚಿತಾರ್ಥ ನಡೆಸಲು ಮುಂದಾಗಿದ್ದರು ಎನ್ನಲಾಗಿದೆ.

ಈ ಸಂಬಂಧ ಸಾರ್ವಜನಿಕರಿಂದ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕ್ರಮವನ್ನು ತಡೆದಿದ್ದು, ಪೋಷಕರಿಗೆ ಅರಿವು ಮೂಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಶ್ರೀದೇವಿ, ಜಿಲ್ಲಾ ಮಕ್ಕಳ ಸಹಾಯವಾಣಿಯ ಯೋಗೇಶ್ ಅವರು ಕುಶಾಲನಗರ ಪಟ್ಟಣ ಪೊಲೀಸರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

6 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago