ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.1) ಸರ್ಕಾರ ಇಂದಿನಿಂದ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ರಾಜ್ಯದಲ್ಲಿ ಹಾಲಿನ ದರ, ವಿದ್ಯುತ್ ದರ ಸೇರಿದಂತೆ ಇನ್ನಿತರ ವಸ್ತುಗಳ ಮೇಲೆ ದರ ಏರಿಕೆ ಮಾಡಿ ಮತ್ತಷ್ಟು ದುಬಾರಿಯಾಗಿವೆ. ಸಿಎಂ ಸಿದ್ದರಾಮಯ್ಯ ಅವರಿಗೆ ಮಂತ್ರಿಗಳ ಮೇಲೆ ಹಿಡಿತವಿಲ್ಲ. ಅದರಿಂದಲೇ ಸಚಿವರೂ ಲೂಟಿಯಲ್ಲಿ ತೊಡಗಿದ್ದಾರೆ ಎಂದರು.
ಸರ್ಕಾರದ ವತಿಯಿಂದ ಉಚಿತವಾಗಿ ನೀಡಬೇಕಾದ ವೈದ್ಯಕೀಯ ಸೇವೆಗಳಿಗೆ ದರ ನಿಗದಿ ಮಾಡಿರುವುದು ಸರಿಯಲ್ಲ. ನಮ್ಮ ಜಿಲ್ಲೆಯ ಕೆ.ಆರ್.ಆಸ್ಪತ್ರೆಯಲ್ಲಿಯೂ ಒಪಿಡಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಅದರ ಜೊತೆಗೆ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ನೀಡಲು ಅಧಿಕ ಶುಲ್ಕ ವಿಧಿಸಲಾಗಿದೆ. ಈ ರಾಜ್ಯ ಸರ್ಕಾರ ದರ ಏರಿಕೆ ಮೂಲಕ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ತುಷ್ಠೀಕರಣದಲ್ಲಿ ತೊಡಗಿದೆ. ಸಂವಿಧಾನಕ್ಕೆ ವಿರುದ್ಧವಾಗಿ ಮುಸಲ್ಮಾನರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡುವ ಮೂಲಕ ವಿಭಿನ್ನ ಧೋರಣೆ ಮಾಡಿದೆ. ಹಾಗಾಗಿ ರಾಜ್ಯ ಸರ್ಕಾರ ಈ ಕೂಡಲೇ ಮುಸಲ್ಮಾನರಿಗೆ ಜಾರಿಗೊಳಿಸಿರುವ ಮೀಸಲಾತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…