ಮೈಸೂರು

ಯುವಜನರಲ್ಲಿ ದೇಶದ ಬಹುಸಂಸ್ಕೃತಿಯ ನೈಜ ಪರಿಚಯದ ಕೊರತೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಯುವಜನತೆಗೆ ದೇಶದ ಬಹುಸಂಸ್ಕೃತಿಯ ನೈಜ್ಯ ಪರಿಚಯದ ಕೊರತೆ ಇದೆ. ಅವರಿಗೆ ಸಂಸ್ಕೃತಿಯ ಅರಿವು ಮೂಡಿಸಬೇಕು. ಆಗ ಮಾತ್ರ ಯುವಕರನ್ನು ಸಂಕುಚಿತ ಮನೋಭಾವನೆಯಿಂದ ಹೊರತರಬಹುದು. ಅದಕ್ಕೆ ಪೂರಕವೆಂಬಂತೆ ಯುವಜನೋತ್ಸವದಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಶಾಸಕ ತನ್ವಿರ್ ಸೇಠ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೆಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಯುವಕ ಸಂಘ ಮತ್ತು ಯುವತಿ ಮಂಡಳಿಗಳು ಮೈಸೂರು ಇವರುಗಳ ಸಹಯೋಗದಲ್ಲಿ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ “ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವ ಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆಗಳನ್ನು ಮಾಡಿ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ತಿಳಿಸಿದರು.

ಯುವಜನೋತ್ಸವದ ಅಂಗವಾಗಿ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಇತರ ಜನಪದ ಕಲೆಗಳನ್ನುಆಯೋಜಿಸಿ, ಪ್ರಜ್ಞಾವಂತ ಯುವ ಕಲಾ ಪ್ರತಿಭೆಗಳನ್ನು ಗುರುತಿಸುವ ಉದ್ದೇಶದಿಂದ ಅವರ ಪ್ರತಿಭೆಗಳನ್ನು ಗ್ರಾಮ ಮಟ್ಟದಿಂದ ರಾಜ್ಯ, ರಾಷ್ಟ್ರಮಟ್ಟದವರೆಗೆ ಅನಾವರಣಗೊಳಿಸುವುದೇ ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ. ಯುವಕರು ಹೆಚ್ಚಾಗಿ ಇದರಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ತೋರಿಸಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಬೇಕು ಎಂದರು.

ಭಾರತದಲ್ಲಿರುವ ಯುವಕ ಯುವತಿಯರ ಸಂಖ್ಯೆ ಬೇರೆ ಯಾವುದೇ ದೇಶದಲ್ಲಿ ಇಲ್ಲ. ದೇಶದ ಯುವ ಶಕ್ತಿಯನ್ನು ಮಾನವ ಸಂಪನ್ಮೂಲವಾಗಿ ಪರಿವರ್ತಿಸಬೇಕು. ಯುವಕರಿಗೆ ಪ್ರೋತ್ಸಾಹ ಕೊಡುವ ದೃಷ್ಟಿಯಲ್ಲಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಯುವಕ ಯುವತಿಯರ ಮನಸ್ಸಿನಲ್ಲಿರುವ ಭಾವನೆಗಳನ್ನು ಅರ್ಥೈಸಿಕೊಂಡು, ಅದಕ್ಕೆ ಪೂರಕವಾದ ಸ್ಪರ್ಧಾತ್ಮಕ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರನ್ನು ಈ ರಾಷ್ಟ್ರದ ಸಂಪತ್ತನ್ನಾಗಿ ಪರಿವರ್ತಿಸಬಹುದು ಎಂದು ಹೇಳಿದರು.

ಯುವಜನರು ತಂತ್ರಜ್ಞಾನದ ಪ್ರಭಾವದಿಂದ ಇತ್ತೀಚಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗಲು ಶೈಕ್ಷಣಿಕ ಕಲಿಕೆಗಳ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚು ಕ್ರಿಯಾತ್ಮಕವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರತಿಯೊಬ್ಬರೂ ಜೀವನದಲ್ಲಿ ಸಮಯ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಸಮಯ ಪಾಲನೆ ಮಾಡಬೇಕು. ಸಾಧನೆ ಇಲ್ಲದೆ ಬದುಕು ಕಟ್ಟಿಕೊಳ್ಳುವುದು ಸಾರ್ಥಕತೆಯಲ್ಲ. ಪ್ರತಿಯೊಬ್ಬರಿಗೂ ಯಾವುದಾದರೊಂದು ಪ್ರತಿಭೆ ಇದ್ದೇ ಇರುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಎಂಬುದು ಮುಖ್ಯವಲ್ಲ,ಭಾಗವಹಿಸುವಿಕೆ ಬಹಳ ಮುಖ್ಯ. ಸ್ಪರ್ಧೆಯಲ್ಲಿ ಗೆದ್ದವರಿಗೆ ಯಶಸ್ಸು ಸಿಗುತ್ತದೆ, ಸೋತವರಿಗೆ ಮತ್ತೆ ಗೆಲ್ಲುವಂತಹ ಧೈರ್ಯ ಸಿಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್ ಎಸ್ ಜವರೆ, ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಎಂ.ಬಿ ಸುರೇಶ್, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಅಬ್ದುಲ್ ರಹಿಮಾನ್ ಎಂ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ರಾಷ್ಟ್ರ ಪ್ರಶಸ್ತಿ ವಿಜೇತರಾದ ಇಮ್ರಾನ್ ಬೇಗ್, ವಿವಿಧ ಕಾಲೇಜಿನ ಸ್ಪರ್ಧಾರ್ಥಿಗಳು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

2 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

3 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

4 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

4 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

5 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

5 hours ago