ಮೈಸೂರು

ಎಚ್‌ ಡಿ ಕೋಟೆ ಗದ್ದಿಗೆ ರಸ್ತೆಯ ವಡ್ಡರಗುಡಿ ಗ್ರಾಮದ ಕೆರೆ ಜಲಾವೃತ

ಪ್ರಶಾಂತ್‌ ಎಸ್‌ ಮೈಸೂರು

ಎಚ್‌ ಡಿ ಕೋಟೆ : ಮಳೆಯ ಆರ್ಭಟದಿಂದ  ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ನೆನ್ನೆ ಸುರಿದ ಬಾರಿ ಮಳೆಯಿಂದ  ಹೆಬ್ಬಾಳ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ ಪರಿಣಾಮ ವಡ್ಡರಗುಡಿ ಸೇತುವೆ ಜಲಾವೃತಗೊಂಡು ಜನಸಾಮಾನ್ಯರ ಸಂಚಾರ ಸ್ಥಗಿತಗೊಂಡಿದೆ, ಹಲವು ತಿಂಗಳಿನಿಂದ ಸಾಕಷ್ಟು ಬಾರಿ ಜಲಾವೃತಗೊಳ್ಳುತ್ತಿರುವ  ಈ ಸೇತುವೆಯಿಂದಾಗಿ ಇಲ್ಲಿನ ಜನರು  ಸಮಸ್ಯೆಯನ್ನು  ಎದುರಿಸುವಂತಾಗಿದೆ . ಅಲ್ಲದೇ ಸೇತುವೆಯ ಅಕ್ಕಪಕ್ಕದ ತಡೆಗೋಡೆಗಳು ಕೂಡ ಶಿಥಿಲ ವ್ಯವಸ್ಥೆಯಲ್ಲಿದೆ. ಈ ವಿಚಾರ ಕುರಿತು ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ . ಇನ್ನಾದರು ಈ ಸಮಸ್ಯೆ ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸುವರಾ ನೋಡಬೇಕಿದೆ.

 

ಪ್ರತಿಬಾರಿಯು ಮಳೆ  ಬಂದಾಗ ಈ ಸಮಸ್ಯೆ ಆಗುತ್ತಲೇ ಇದೆ. ಅದರು ಸಂಬಂಧಪಟ್ಟವರು ಯಾರು ಕೂಡ ಇದರ ಬಗ್ಗೆ ಗಮನಹರಿಸುತ್ತಿಲ್ಲ. ನಾವು ಪ್ರತಿದಿನ  ಕೂಲಿ ಕೆಲಸಕ್ಕೆ ಹೋಗುವುದು ಅದೇ ರಸ್ತೆಯಲ್ಲಿ ರಾತ್ರಿ ವೇಳೆಯು ಒಡಾಡುತ್ತೇವೆ. ಅಲ್ಲದೇ ಸೇತುವೆ ಬಳಿ  ಒಂದು ಬೀದಿ ದೀಪ ಕೂಡ ಇಲ್ಲ. ಹೀಗಾಗಿ ಮಳೆ ಬಂದಾಗ ಸೇತುವೆ ಸಮಸ್ಯೆ, ಇಲ್ಲದಿದ್ದಾಗ ಬೀದಿ ದೀಪದ ಸಮಸ್ಯೆ. ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ.  ಇನ್ನಾದರು ಸಂಬಂಧಪಟ್ಟವರು ಸಮಸ್ಯೆಯನ್ನು ಗಮನಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕಿದೆ.

-ಅಭಿಲಾಷ್‌ ಆರಾಧ್ಯ, ವಡ್ಡರಗುಡಿ ನಿವಾಸಿ

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

10 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

12 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago