Mysore
24
clear sky

Social Media

ಮಂಗಳವಾರ, 20 ಜನವರಿ 2026
Light
Dark

ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Lakshmi Hebbalkar visits Chamundeshwari with her family

ಮೈಸೂರು : ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು.

ಆಷಾಢ ಮಾಸವು ಬಹಳ ವಿಶೇಷವಾಗಿದ್ದು, ಶಕ್ತಿ ದೇವತೆಗಳ ಆರಾಧನೆಗೆ ಹೆಚ್ಚು ಮಹತ್ವ ನೀಡಿರುವ ಮಾಸವಾಗಿದೆ. ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದೆ. ರಾಜ್ಯದಲ್ಲಿ ಈ ವರ್ಷವೂ ಉತ್ತಮ ಮಳೆಯಾಗಿ ರೈತರ ಬದುಕು ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸಲಾಯಿತು ಎಂದು ಸಚಿವರು ತಿಳಿಸಿದರು.

2023ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲಿ ಎಂದು ಹರಕೆ ಹೊತ್ತುಕೊಂಡಿದ್ದರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಜಯಭೇರಿ ಬಾರಿಸಿ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಮುಂಡಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದರು. ಇದಾದ ಬಳಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಮೊದಲ ಕಂತಿನ ಮೊದಲ ಫಲಾನುಭವಿ ಮೊತ್ತವನ್ನು ತಾಯಿ ಚಾಮುಂಡೇಶ್ವರಿಗೆ ಸಚಿವರು ಅರ್ಪಿಸಿದ್ದರು. ಮೈಸೂರಿಗೆ ಬಂದಾಗಲೆಲ್ಲಾ ತಪ್ಪದೇ ಚಾಮುಂಡೇಶ್ವರಿ ತಾಯಿ ದರ್ಶನ ಪಡೆಯುವುದು ಸಚಿವರ ವಾಡಿಕೆಯಾಗಿದೆ.

ಈ ವೇಳೆ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಪುತ್ರ ಮೃಣಾಲ್ ಹೆಬ್ಬಾಳಕರ್, ಸಚಿವರ ತಾಯಿ, ಸಹೋದರಿಯರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags:
error: Content is protected !!