ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ.
ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ಮುಂಜಾನೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ಅಭಿಷೇಕ, ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು.
ನಾಡಿನ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ಧರ್ಮ ದರ್ಶನ,100 ರೂ, ಹಾಗೂ 300 ರೂಪಾಯಿಗಳ ವಿಶೇಷ ದರ್ಶನ ಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಭಕ್ತಾದಿಗಳಿಗೆ ಕುಡಿಯುವ ನೀರು, ಉಪಾಹಾರ, ಪ್ರಸಾದ ವಿತರಣೆ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನ ಜಿಲ್ಲಾಡಳಿತದಿಂದ ಒದಗಿಸಲಾಗಿತ್ತು.
ಸರತಿ ಸಾಲಿನಲ್ಲಿ ದರ್ಶನಕ್ಕೆ ಹೋಗುವ ಭಕ್ತರಿಗೆ ನೆರಳಿನ ವ್ಯವಸ್ಥೆ ಮಾಡಲಾಗುತ್ತಿದ್ದು, ನೂಕುನುಗ್ಗಲು ಉಂಟಾಗಬಾರದು ಎಂದು ಬ್ಯಾರಿಕೇಡ್ ವ್ಯವಸ್ಥೆ. ಸಿಸಿಟಿವಿ ಅಳವಡಿಕೆ, ಅಶ್ವದಳ ಪೋಲಿಸ್ ಸಿಬ್ಬಂದಿ, ದೇವಸ್ಥಾನ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.
ಹರಕೆ ಹೊತ್ತವರು ದೇಗುಲಕ್ಕೆ ಆಗಮಿಸಿದ ಭಕ್ತರಿಗೆ ಒಂದು ಕಡೆ ಸಿಹಿ ವಿತರಿಸುತ್ತಿದ್ದರೇ ಮತ್ತೊಂದು ಕಡೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಚಾಮುಂಡಿ ಬೆಟ್ಟಕ್ಕೆ ಖಾಸಗೀ ವಾಹನಗಳಿಗೆ ನಿರ್ಬಂಧ ವಿದ್ದು ಮೈಸೂರಿನ ಹೆಲಿಪ್ಯಾಡ್ ನಿಂದ ಉಚಿತವಾಗಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…
ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…
ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…
ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…
ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…
ಹನೂರು : ತಾಲೂಕಿನ ಬಿ.ಆರ್.ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಸುಮಾರು 20 ಎಕರೆಗೂ…