ಮೈಸೂರು

ಮೊದಲ ಆಷಾಢ ಶುಕ್ರವಾರ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಅಧಿದೇವತೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ.

ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿತ್ತು. ಮುಂಜಾನೆಯಿಂದಲೇ ಶ್ರೀ ಚಾಮುಂಡೇಶ್ವರಿ ತಾಯಿಗೆ ಅಭಿಷೇಕ, ವಿವಿಧ ಪುಷ್ಪಗಳಿಂದ  ಅಲಂಕರಿಸಲಾಗಿತ್ತು.

ನಾಡಿನ‌ ಮೂಲೆ ಮೂಲೆಗಳಿಂದ ಸಹಸ್ರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ಧರ್ಮ ದರ್ಶನ,100 ರೂ, ಹಾಗೂ 300 ರೂಪಾಯಿಗಳ ವಿಶೇಷ ದರ್ಶನ   ಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಭಕ್ತಾದಿಗಳಿಗೆ ಕುಡಿಯುವ ನೀರು, ಉಪಾಹಾರ, ಪ್ರಸಾದ ವಿತರಣೆ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನ ಜಿಲ್ಲಾಡಳಿತದಿಂದ ಒದಗಿಸಲಾಗಿತ್ತು.

ಸರತಿ ಸಾಲಿನಲ್ಲಿ ದರ್ಶನಕ್ಕೆ ಹೋಗುವ ಭಕ್ತರಿಗೆ ನೆರಳಿನ ವ್ಯವಸ್ಥೆ ಮಾಡಲಾಗುತ್ತಿದ್ದು, ನೂಕುನುಗ್ಗಲು ಉಂಟಾಗಬಾರದು ಎಂದು ಬ್ಯಾರಿಕೇಡ್ ವ್ಯವಸ್ಥೆ. ಸಿಸಿಟಿವಿ ಅಳವಡಿಕೆ, ಅಶ್ವದಳ ಪೋಲಿಸ್ ಸಿಬ್ಬಂದಿ, ದೇವಸ್ಥಾನ ಸುತ್ತ  ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.

ಹರಕೆ ಹೊತ್ತವರು ದೇಗುಲಕ್ಕೆ ಆಗಮಿಸಿದ ಭಕ್ತರಿಗೆ ಒಂದು ಕಡೆ ಸಿಹಿ ವಿತರಿಸುತ್ತಿದ್ದರೇ ಮತ್ತೊಂದು ಕಡೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಚಾಮುಂಡಿ ಬೆಟ್ಟಕ್ಕೆ ಖಾಸಗೀ ವಾಹನಗಳಿಗೆ ನಿರ್ಬಂಧ ವಿದ್ದು ಮೈಸೂರಿನ ಹೆಲಿಪ್ಯಾಡ್ ನಿಂದ ಉಚಿತವಾಗಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

11 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

12 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

13 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

17 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

17 hours ago