ಮೈಸೂರು: ಜಿಲ್ಲೆಯಾದ್ಯಂತ ಮಳೆ ಹೆಚ್ಚಾಗಿದ್ದು, ಈಗಾಗಲೇ ಕಬಿನಿ ಜಲಾಶಯದಿಂದ ಸುಮಾರು 70,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಅಲ್ಲದೆ ನುಗು ಡ್ಯಾಮ್ ನಿಂದಲೂ ನೀರನ್ನು ಹೊರ ಬಿಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ನದಿ ಪಾತ್ರದ ಗ್ರಾಮಗಳ ಜನರ ಸುರಕ್ಷತೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮುಂದಿನ ಶನಿವಾರದ ಒಳಗೆ ಕೆ.ಆರ್.ಎಸ್ ಜಲಾಶಯದಿಂದ ನೀರನ್ನು ಹೊರಬಿಡುವ ಸಂಭವವಿದ್ದು, ಟಿ.ನರಸೀಪುರ ತಾಲೂಕಿನ ನದಿ ಪಾತ್ರದ ಜನತೆ ಸುರಕ್ಷತೆ ಸೇರಿದಂತೆ ನಂಜನಗೂಡಿನ ನದಿ ಪಾತ್ರದ ಜನರ ಸುರಕ್ಷತೆಗಾಗಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದರು.
ಇಂದಿನಿಂದಲೇ ಅಧಿಕಾರಿಗಳು ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಗೆ ಜಾಗೃತರಾಗಿ ಇರುವಂತೆ ಹಾಗೂ ನದಿಯ ಎರಡೂ ದಂಡೆಗಳಲ್ಲಿನ ಸಾರ್ವಜನಿಕರು ಹಾಗೂ ಜಾನುವಾರಿಗಳ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ತಿಳಿಸಬೇಕು.
ಅತಿಯಾದ ಮಳೆಯಿಂದ ಹಾನಿ ಉಂಟಾಗಿ ಯಾವುದೇ ಅಚಾತುರ್ಯ ಹಾಗೂ ಪ್ರಾಣಹಾನಿಗಳು ಸಂಭವಿಸದಂತೆ ಮೊದಲೇ ಪರಿಸ್ಥಿತಿಯನ್ನು ಅರಿತು ಅಲ್ಲಿನ ಜನರನ್ನು ಕಾಳಜಿ ಕೇಂದ್ರಕ್ಕೆ ಕಳುಹಿಸಲು ಅಗತ್ಯ ಕ್ರಮ ವಹಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಜನರಿಗೆ ಬೇಕಾಗುವಂತಹ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಉತ್ತಮ ಆಹಾರ, ಶುದ್ಧ ಕುಡಿಯುವ ನೀರು ಹಾಗೂ ಪ್ರಾಥಮಿಕ ಆರೋಗ್ಯ ಚಿಕಿತ್ಸಾ ಸೌಲಭ್ಯವನ್ನು ಒದಗಿಸಬೇಕು. ಅದಕ್ಕೆ ಬೇಕಾಗುವಂತಹ ಕ್ರಮವನ್ನು ಹಿಂದಿನಿಂದಲೇ ಕೈಗೊಳ್ಳಬೇಕು ಎಂದು ತಿಳಿಸಿದರು.
ವಿದ್ಯುತ್ ನಿಗಮದವರು ಗ್ರಾಮೀಣ ಪ್ರದೇಶದಲ್ಲಿ ಅತಿಯಾದ ಮಳೆ ಗಾಳಿಯಿಂದ ಮರಗಳು ಮುರಿದು ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸಂದರ್ಭ ಉಂಟಾಗುತ್ತದೆ. ಇಂತಹ ಸನ್ನಿವೇಶಗಳು ಎದುರಾಗುವ ಮೊದಲೇ ಅವುಗಳಿಗೆ ಪರ್ಯಾಯವನ್ನು ಹುಡುಕಿ ಜನರಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳು ಅತಿಯಾದ ಮಳೆ ಹಾಗೂ ಗಾಳಿಗೆ ಬೀಳುವ ಮರಗಳನ್ನು ಗುರುತಿಸಿ ಅವುಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಅಲ್ಲದೆ ಹಲವಾರು ಕಡೆ ವಾಟರ್ ಬ್ಲಾಕಿಂಗ್ ಸಮಸ್ಯೆಗಳಿದ್ದು, ಅವುಗಳನ್ನು ಯಾವುದೇ ತಕ್ಷಣವೇ ಪರಿಹರಿಸಲು ನೈಟ್ ಟೀಮ್ ನೇಮಕ ಮಾಡಬೇಕು ಎಂದು ಸೂಚಿಸಿದರು.
ಈಗಾಗಲೇ ನಂಜನಗೂಡು, ಸರಗೂರು ತಾಲೂಕುಗಳಲ್ಲಿ ಅತಿಯಾದ ಮಳೆಯಿಂದಾಗಿ ಬ್ರಿಡ್ಜ್ ಗಿಂತಲೂ ಮೇಲೆ ನೀರು ಹರಿಯುತ್ತಿರುವುದರಿಂದ ಅಲ್ಲಿನ ಜನರಿಗೆ ಹಾನಿ ಉಂಟಾಗುವ ಸಂಭವವಿರುತ್ತದೆ. ಹಾಗಾಗಿ ಅಧಿಕಾರಿಗಳು ಸಾರ್ವಜನಿಕರು ಬ್ರಿಡ್ಜ್ ಪ್ರದೇಶದಲ್ಲಿ ಓಡಾಡದಂತೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಕುಡಿಯುವ ನೀರನ್ನು ಸರಬರಾಜು ಮಾಡುವ ಮೊದಲು ಅದರ ಗುಣಮಟ್ಟವನ್ನು ಪ್ರತಿದಿನವೂ ಪರೀಕ್ಷಿಸಬೇಕು. ಈ ವಿಷಯವಾಗಿ ಅಧಿಕಾರಿಗಳು ಯಾವುದೇ ನಿರ್ಲಕ್ಷ ತೋರದೆ ಶುದ್ಧ ಕುಡಿಯುವ ನೀರನ್ನು ಸಾರ್ವಜನಿಕರಿಗೆ ಸರಬರಾಜು ಮಾಡಬೇಕು ಎಂದು ಹೇಳಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಕಂದಾಯ ಇಲಾಖೆಯವರು ಮಳೆಹಾನಿ ಸಂಭವಿಸಿದ್ದಲ್ಲಿ ಅವುಗಳ ಬಗ್ಗೆ ತಕ್ಷಣವೇ ಮಾಹಿತಿ ನೀಡಿ ತ್ವರಿತ ಪರಿಹಾರ ದೊರಕಿಸಲು ಮುಂದಾಗಬೇಕು. ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಹಾನಿ ಉಂಟಾಗಿದ್ದರೆ, ಆ ಸ್ಥಳಕ್ಕೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಬೇಕು ಎಂದರು.
ಮಕ್ಕಳಿಗೆ ಯಾವುದೇ ರೀತಿಯ ಹಾನಿ ಉಂಟಾಗದಂತೆ ತಡೆಯಲು ಶಿಥಿಲಗೊಂಡ ಶಾಲೆ ಹಾಗೂ ಅಂಗನವಾಡಿಗಳನ್ನು ಬೇರೆ ಕಡೆ ವರ್ಗಾವಣೆ ಮಾಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ನಂಜನಗೂಡು, ಎಚ್ಡಿ ಕೋಟೆ, ಸರಗೂರು ತಾಲೂಕಿನ ತಹಶೀಲ್ದಾರರು ಸೇರಿದಂತೆ ಇನ್ನಿತರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…