ಮೈಸೂರು

ಜಮೀನು ವಿವಾದ: ಜಮೀನನಲ್ಲೇ ಪರಸ್ಪರ ಬಡಿದಾಡಿಕೊಂಡ ಕುಟುಂಬಸ್ಥರು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕಾಗಿ ಒಂದೇ ಮನೆಯ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಹುಣಸೂರು ತಾಲ್ಲೂಕಿನ ಹರಳಹಳ್ಳಿ ಗ್ರಾಮದಲ್ಲಿ ಏಪ್ರಿಲ್‌.9 ರಂದು ಘಟನೆ ನಡೆದಿದ್ದು, ಒಂದೇ ಕುಟುಂಬದಲ್ಲಿ ವಾಸವಾಗಿರುವ ಮೊದಲ ಹೆಂಡತಿ ಮಗ ಜಮೀನು ಉಳುಮೆ ಮಾಡುವುದನ್ನು ಪ್ರಶ್ನಿಸಿ ಎರಡನೇ ಹೆಂಡತಿ ಮಕ್ಕಳು ಆಕ್ಷೇಪ ವ್ಯಕ್ತಪಡಿಸಿ ಉಳುಮೆ ಮಾಡುತ್ತಿದ್ದ ಮಹೇಶ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಈ ಹಲ್ಲೆಯಲ್ಲಿ ಎರಡನೇ ಹೆಂಡತಿಯ ಮಕ್ಕಳು ಮಹೇಶ್‌ ಎಂಬಾತನ ಬೆನ್ನಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಇದೇ ವೇಳೆ ಮಹೇಶ್‌ ಅವರ ಮಗಳು ದಿವ್ಯಗೆ ಗಂಭೀರ ಗಾಯವಾಗಿದೆ.

ಒಂದೇ ಕುಟುಂಬಸ್ಥರು ಜಮೀನಿನಲ್ಲಿ ಪರಸ್ಪರ ಬಡಿದಾಡಿಕೊಳ್ಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯ ಬಗ್ಗೆ ಹುಣಸೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಇನ್ನೂ ಹಲ್ಲೇ ಮಾಡಿದ ಆರು ಜನರಾದ ಭೈರೇಗೌಡ, ರಂಜಿತ್, ಪ್ರೇಮಮ್ಮ, ತೇಜಸ್ವಿನಿ, ರೇಣುಕಾ ಮತ್ತು ಪುಟ್ಟ ಲಕ್ಷ್ಮಮ್ಮ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

11 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

11 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

11 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

12 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

12 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

12 hours ago