ಹುಣಸೂರು: ಜಮೀನು ವಿವಾದ ಏರ್ಪಟ್ಟ ಪರಿಣಾಮ ಎರಡು ಕುಟುಂಬದ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊಲೆ ಬೆದರಿಕೆ ಹಾಕಿದ ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಳಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿ, ವಸಂತ, ಅರ್ಜುನ, ಶಾಂತಮ್ಮ, ರವಿ, ಸಿದ್ದರಾಜು, ನಾಗರಾಜು ಹಾಗೂ ಸಿದ್ದಯ್ಯ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕೊಳಘಟ್ಟ ಗ್ರಾಮದ ಸರ್ವೆ ನಂ.73ರ 4 ಎಕರೆ ಜಮೀನಿನ ವಿಚಾರದಲ್ಲಿ ರತ್ನಮ್ಮ ಹಾಗೂ ಸ್ವಾಮಿ ಎಂಬುವವರ ಕುಟುಂಬದ ನಡುವೆ ಜಗಳ ನಡೆದಿದೆ. ಈ ವೇಳೆ ರತ್ಮಮ್ಮ ಜಮೀನು ಸರ್ವೆ ನಡೆಸುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಿಗ ಪರಿಶೀಲನೆ ನಡೆಸಲು ಜಮೀನಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಆರೋಪಿ ಸ್ವಾಮಿ ಸೇರಿದಂತೆ 8 ಮಂದಿ ಕ್ಯಾತೆ ತೆಗೆದು ಗಲಾಟೆ ನಡೆಸಿದ್ದಲ್ಲದೇ, ರತ್ನಮ್ಮ ಹಾಗೂ ಮಗ ವಿಶಾಂತ್ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ರತ್ನಮ್ಮ ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ರತ್ನಮ್ಮರ ದೂರಿನ ಮೇರೆಗೆ ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…