ಪಿರಿಯಾಪಟ್ಟಣ: ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಅಂಬಲಾರೆ ಗ್ರಾಮದಲ್ಲಿ ಘಟನೆ ನಡೆದಿದೆ.
ಜಮೀನು ಉಳುಮೆ ಮಾಡಲು ತೆರಳಿದ್ದ ಒಂದು ಕುಟುಂಬವನ್ನು ಮತ್ತೊಂದು ಕುಟುಂಬ ಹೋಗಿ ತಡೆದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು, ಜಗಳ ವಿಕೋಪಕ್ಕೆ ತಿರುಗಿದೆ. ಎರಡು ಗುಂಪುಗಳು ಪರಸ್ಪರ ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದಾಡಿಕೊಂಡಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ.
ಮಾರಾಮಾರಿಯಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗಾಯಾಳುಗಳನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.





