ಹುಣಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತನೆ ತೋರಿಸಿರುವ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರತ್ನಪುರಿ ಗ್ರಾಮದಲ್ಲಿ ನಡೆದಿದೆ.
ಪುಟ್ಟಸ್ವಾಮಿ ಹಾಗೂ ಪುತ್ರ ಗೌತನ್ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇಷ್ಮಾ ಎಂಬುವವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜಮೀನು ವಿವಾದದ ಹಿನ್ನೆಲೆಯಲ್ಲಿ ಮಹಿಳೆಯನ್ನು ಎಳೆದಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





