Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ದಸರಾ ಸಾಂಸ್ಕೃತಿಕ ಉಪ ಸಮಿತಿಯಿಂದ ದಸರಾ ವೆಬ್ ಸೈಟ್ ಬಿಡುಗಡೆ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಮೈಸೂರು ಅರಮನೆ ಮಂಡಳಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಉಪ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿ ಅತ್ಯಂತ ಸರಳವೂ ಹಾಗೂ ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾವನ್ನು ಆಚರಿಸುತ್ತಿದ್ದು, ಸಾಂಪ್ರದಾಯಿಕ ದಸರಾ ಆಚರಣೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಕ್ರಮಬದ್ಧವಾಗಿ ಆಯೋಜಿಸಿ ಎಂದು ತಿಳಿಸಿದರು.

ಈಗಾಗಲೇ 18 ವಿವಿಧ ದಸರಾ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಈ ಬಾರಿ ಹಿಂದಿನ ಅರಮನೆಯ ವೈಭವವನ್ನು ಮರಳಿ ತರುವ ನಿಟ್ಟಿನಲ್ಲಿ 250 (ಸೆರಮೊನಿ ಡ್ರೆಸ್) ಸಮವಸ್ತ್ರಗಳಿಗಾಗಿ ಟೆಂಡರ್ ಕರೆಯಲಾಗುವುದು. ಜಿಲ್ಲಾಮಟ್ಟದಲ್ಲಿ ರೈತ ದಸರಾವನ್ನು ಆಯೋಜಿಸಿ. ರೈತ ದಸರಾದಲ್ಲಿ ರೈತರಿಗೆ ಉಪಯೋಗವಾಗುವ ಮಣ್ಣಿನ ಫಲವತ್ತತೆ, ಮಿಶ್ರ ಬೆಳೆ, ಪರ್ಯಾಯ ಬೆಳೆ ಹಾಗೂ ಆರ್ಥಿಕ ಅಭಿವೃದ್ಧಿ, ಜಿಡಿಪಿ ಮುಂತಾದ ವಿಚಾರಗಳನ್ನು ಒಳಗೊಂಡ ವಿಚಾರ ಸಂಕಿರಣಗಳನ್ನು ಆಯೋಜಿಸಿ ಎಂದು ತಿಳಿಸಿದರು.

ಈ ವೇಳೆ ಸಾಂಸ್ಕೃತಿಕ, ಕ್ರೀಡಾ, ಲಲಿತಕಲಾ, ಕವಿಗೋಷ್ಠಿ, ಗ್ರಾಮೀಣ ದಸರಾ, ಯೋಗಾದಸರಾ ಮಹಿಳಾ ಹಾಗೂ ಮಕ್ಕಳ ದಸರಾ, ಆಹಾರ ಮೇಳ, ಚಲನ ಚಿತ್ರೋತ್ಸವ, ಯುವ ಸಂಭ್ರಮ ಹಾಗೂ ಯುವ ದಸರಾ ಸೇರಿದಂತೆ ವಿವಿಧ ದಸರಾ ಉಪ ಸಮಿತಿಗಳ ಅಧಿಕಾರಿಗಳೊಟ್ಟಿಗೆ/ಸದಸ್ಯರೊಟ್ಟಿಗೆ ಚರ್ಚಿಸಿದರು.

ನಂತರ ದಸರಾ ಸಾಂಸ್ಕೃತಿಕ ಉಪಸಮಿತಿಯ ವತಿಯಿಂದ ಪೋಸ್ಟರ್ ಬಿಡುಗಡೆ ಹಾಗೂ ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.

ಸಭೆಯಲ್ಲಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಅಪರ ಮುಖ್ಯ ಕಾರ್ಯದರ್ಶಿಗಳಾದ ಮಂಜುಳಾ, ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಆಶಾದ್ ಊರ್ ರೆಹಮಾನ್ ಶರೀಫ್, ಕೆಡಿಪಿ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ದಸರಾ ಉಪ ಸಮಿತಿಗಳ ನೋಡಲ್ ಅಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ