Mysore
29
clear sky

Social Media

ಶುಕ್ರವಾರ, 07 ಫೆಬ್ರವರಿ 2025
Light
Dark

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಬಿವೈ ವಿಜಯೇಂದ್ರ

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಇವರ ಆಡಳಿತದ ಅವಧಿಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಿವೆ. ಗುಲ್ಬರ್ಗಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಆಗಿದೆ. ಚಾಮರಾಜ ಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ, ನಂಜನಗೂಡಿನಲ್ಲಿ ಹಸುವಿನ ಬಾಲ ಕತ್ತರಿಸಿದ ಘಟನೆ, ಬೀದರ್‌ನಲ್ಲಿ ನಿನ್ನೆ ಹಣ ತುಂಬಲು ಬಂದಿದ್ದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಗಳನ್ನ ಹತ್ಯೆ ಮಾಡಿದ್ದ ಘಟನೆ ಸೇರಿದಂತೆ ಇನ್ನು ಅನೇಕ ಘಟನೆಗಳು ನಡೆದಿವೆ. ಇಷ್ಟಾದರು ರಾಜ್ಯ ಕಾಂಗ್ರೆಸ್‌ ಸರ್ಕಾರ ದೇಶದ್ರೋಹಿಗಳನ್ನು ಮಟ್ಟ ಹಾಕುವ ಕೆಲಸ ಮಾಡುತ್ತಿಲ್ಲ. ತುಷ್ಠೀಕರಣ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜಾತಿಗಣತಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಜಾತಿಗಣತಿ ವರದಿ ಸೋರಿಕೆ ಹಾಗಿದ್ದು, ಅವೈಜ್ಞಾನಿಕವಾಗಿದೆ. ಈ ಹಿನ್ನಲೆಯಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ವಿರೋಧ ಮಾಡುತ್ತಿವೆ. ಬೇರೆ ಜಾತಿಯವರಿಗೆ ನ್ಯಾಯ ಒದಗಿಸಿ ಆದರೆ ರಾಜಕೀಯ ಮಾಡಬೇಡಿ ಎಂದು ಹೇಳಿದರು.

ಯತ್ನಾಳ್‌ ಅವರ ಸವಾಲಿನ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಅವರ ವಿರುದ್ದ ಮಾತನಾಡುವಾಗ ಎಚ್ಚರಿಕೆ ವಹಿಸಿ ಎಂದು ಅನೇಕ ನಾಯಕರಿಗೆ ಹೇಳಿದ್ದೆ. ಅವರ ವಿರುದ್ಧ ಮಾತನಾಡಿದರೆ ಕಾರ್ಯಕರ್ತರಿಗೆ ನೋವಾಗುತ್ತದೆ. ತಳಮಟ್ಟದಿಂದ ಯಡಿಯೂರಪ್ಪ ಬಿಜೆಪಿ ಪಕ್ಷ ಕಟ್ಟಿದ್ದಾರೆ ಎಂದರು.

Tags: