ಮೈಸೂರು

ಮೈಸೂರಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಸಂಸದ ಯದುವೀರ್‌ ಆತಂಕ

ಮೈಸೂರು : ಸಾಂಸ್ಕೃತಿಕ ನಗರಿ, ಸ್ವಚ್ಚತೆ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ತಲೆತಗ್ಗಿಸುವ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಕುಸಿಯುತ್ತಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆತಂಕ ವ್ಯಕ್ತಪಡಿಸಿದರು.

ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಮುಗಿದ ಬಳಿಕವೂ ಹಬ್ಬದ ವಾತಾವರಣ ಇದೆ. ಆದರೆ ಈಗ ಕಳೆದ ಎರಡು ದಿನಗಳಿಂದ ಹೀನಕೃತ್ಯಗಳು ನಡೆದಿವೆ. ಮೈಸೂರು ಇತಿಹಾಸ ಸ್ವಚ್ಛತೆ ಒಳ್ಳೆಯ ಆಡಳಿತಕ್ಕೆ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ಕಾನೂನು ಆಡಳಿತ ಕುಸಿಯುತ್ತಿದೆ. ಈ ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಆಯಿತು. ನಂತರ 340 ಕೋಟಿ ಡ್ರಗ್ಸ್ ಪತ್ತೆಯಾಯಿತು. ಮಹಾರಾಷ್ಟ್ರ ಪೊಲೀಸರು ಇದನ್ನು ಕಂಡು ಹಿಡಿದರು. ಇದಾದ ಬಳಿಕ ಅರಮನೆ ಮುಂಭಾಗ ಮೊನ್ನೆ ಒಂದು ಕೊಲೆ ಆಗಿದೆ. ನಿನ್ನೆ ಚಿಕ್ಕ ಮಗು ಮೇಲೆ ಅತ್ಯಾಚಾರ ಕೊಲೆಯಾಗಿದೆ. ಬಲೂನ್ ಮಾರಾಟ ಮಾಡುವ ಮಗು ಮೇಲೆ ಹೀನ ಕೃತ್ಯ ಆಗಿದೆ ಎಂದು ಬೇಸರಿಸಿದರು.

ಇದನ್ನು ಓದಿ : ಯತೀಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್‌ ಸಿಂಹ

ಮೈಸೂರಿನಲ್ಲಿ ಇಂತಹ ಘಟನೆಗಳು ಈ ಹಿಂದೆ ಆಗಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಗರದ ಹೃದಯ ಭಾಗದಲ್ಲೇ ಇಂತಹ ಘಟನೆಗಳು ನಡೆದರೆ ಹೇಗೆ. ಕಿಡಿಗೇಡಿಗಳಿಗೆ ಯಾವುದೇ ರೀತಿಯ ಭಯ ಇಲ್ಲ. ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಇದು ನನ್ನ ತವರು ಅಂತಾರೆ. ಇಂತಹ ಘಟನೆಗಳನ್ನು ಆಗದಂತೆ ತಡೆಯಲು ಆಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.

ದಸರಾ ಪಾಸ್ ವಿಚಾರದಲ್ಲಿ ಗೊಂದಲ ಆಯಿತು. ಸಿಟ್ಟಿಂಗ್ ವ್ಯವಸ್ಥೆ ಕಡಿಮೆ ಮಾಡಿ ಪಾಸ್ ಹೆಚ್ಚು ಕೊಟ್ಟರು. ಪಾಸ್ ಇರೋರಿಗೂ ಅರಮನೆ ಒಳಗಡೆ ಬಿಡಲಿಲ್ಲ. ಇದು ಕೇವಲ ಕಾಂಗ್ರೆಸ್ ನಾಯಕರ ದಸರಾ ಆಯಿತು. ಜನ ಸಾಮಾನ್ಯರ ದಸರಾ ಆಗಲಿಲ್ಲ. ನಾಗರಿಕರಿಗೆ ಅನುಕೂಲ ಮಾಡಲಿಲ್ಲ. ಕೇವಲ ಉಳ್ಳವರ ದಸರಾ ದರ್ಬಾರ್ ಆಯಿತು ಎಂದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಯದುವೀರ್ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago