yaduveer wodeyer
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಒಡೆಯರ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಇರೋದು ಕೆಲಸ ಮಾಡೋಕೆ, ಹೋಲಿಕೆ ಮಾಡೋಕ್ಕಲ್ಲ. ನಾನು ಸಂಸದನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ನನ್ನ ಹಿಂದಿನವರು ಏನು ಮಾಡಿದರು ಎಂಬುದನ್ನು ನಾನು ಹೋಲಿಕೆ ಮಾಡಲ್ಲ. ನನ್ನ ಆಲೋಚನೆಗಳ ಪ್ರಕಾರ ಕೆಲಸ ಮಾಡುತ್ತಿದ್ದೇನೆ.
ಸರ್ಕಾರದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಪ್ರತಿಭಟನೆಗಳು ಆಗುತ್ತಲೇ ಇವೆ. ಕ್ಷಮೆ ಕೇಳುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ಕ್ಷಮೆ ಕೇಳೋದು ಬಿಡೋದು ಅವರಿಗೆ ಬಿಟ್ಟಿದ್ದ. ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಇನ್ನು ಮೈಸೂರಿನಲ್ಲಿ ಡ್ರಗ್ಸ್ ಜಾಲ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಒಳ್ಳೆಯ ಕಾರ್ಯಾಚರಣೆ. ಡ್ರಗ್ಸ್ ಅನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಡ್ರಗ್ಸ್ ತಡೆಯುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಇನ್ನು ನರಸಿಂಹರಾಜ ಕ್ಷೇತ್ರದ ಜನಪ್ರತಿನಿಧಿಗಳು ಅಲ್ಲಿನ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಸವಾಲಾಗಿ ಸ್ವೀಕರಿಸಿ ಜನರ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…