ಮೈಸೂರು: ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಪಂಪ್ ಸೆಟ್ ಮನೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದೆ.
ಕೂಡಲೇ ಗ್ರಾಮಸ್ಥರು ಪಂಪ್ ಸೆಟ್ ಮನೆಯಲ್ಲಿ ಚಿರತೆ ಮರಿಗಳು ವಾಸಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಮರಿಗಳನ್ನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೋನು ಇಟ್ಟು ತಾಯಿ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.