ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದರು.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀವು ನಿಮ್ಮ ಕೈ ಕೆಳಗಿನ ಅಧಿಕಾರಿಗಳು ನೀಡಿರುವ ವರದಿಯನ್ನು ತಂದು ಸಭೆಯಲ್ಲಿ ಮಂಡಿಸಿದರಷ್ಟೇ ಸಾಲದು. ವಾರಕ್ಕೆ ಒಮ್ಮೆಯಾದರೂ ಕಚೇರಿ ಬಿಟ್ಟು ಗ್ರಾಮೀಣ ಪ್ರದೇಶಕ್ಕೆ ತೆರಳಿ ಬಡವರು, ರೈತರ ಸಂಕಷ್ಟಗಳನ್ನು ಅರಿಯಬೇಕು. ಆಗ ಮಾತ್ರ ನೀವು ಅವರಿಗೆ ಸಹಾಯ ಮಾಡಲು ಸಾಧ್ಯ ಎಂದು ಹೇಳಿದರು.
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಗ್ರಾಮೀಣ ಭಾಗದಲ್ಲಿ ಇನ್ನೂ ಕೂಡ ಸಾಕಷ್ಟು ಮಂದಿಗೆ ಮನೆ ಅಥವ ನಿವೇಶನವಿಲ್ಲ. ಇಂತಹ ವಾಸ್ತವಗಳನ್ನು ಅಧಿಕಾರಿಗಳು ಖುದ್ದು ಸ್ಥಳಕ್ಕೆ ತೆರಳಿ ತಿಳಿಯಬೇಕು. ಮೈಸೂರು ಮುಖ್ಯಮಂತ್ರಿಗಳ ತವರು ಜಿಲ್ಲೆ. ರಾಜರ ಕೊಡುಗೆ ಸಾಕಷ್ಟಿದೆ. ಇಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲು ಅಧಿಕಾರಿಗಳು ಸಹಕರಿಸಬೇಕು ಎಂದರು.
ಮೈಸೂರು ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275ನ ಭೂಮಿ ವಶಕ್ಕೆ ಪಡೆಯಲಾಗಿದೆಯೇ ಭೂಮಿ ಪಡೆಯಲು ತಕರಾರು ಇರುವ ಕಡೆ ಬಗೆಹರಿಸಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಮೊದಲ ಬಾರಿ ಲೋನ್ ಪಡೆಯುವವರಿಗೆ ಸಿಬಿಲ್ ಸ್ಕೋರ್ ನೆಪ ಹೇಳಿ ಸತಾಯಿಸಬಾರದು. ರೈತರಿಗೆ ಯಾವುದಾದರೂ ಯೋಜನೆಯಡಿ ಪ್ರೋತ್ಸಾಹಧನ ಬಂದರೆ ಅದನ್ನು ಸಾಲದ ಬಡ್ಡಿಗೆ ವಜಾ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ಮೇನೇಜರ್‌ಗೆ ಸೂಚನೆ ನೀಡಿದರು.
ಹತ್ತಿ ಬೆಳೆ ಬೆಳೆಯುವ ರೈತರ ಸಂಖ್ಯೆ ಕಡಿಮೆ ಬರುತ್ತಿದೆ. ಮುಸುಕಿನ ಜೋಳದ ಬೇಳೆ ಹೆಚ್ಚು ಬೆಳೆಯುತ್ತಿದ್ದಾರೆ. ಒಂದೇ ಭೂಮಿಯಲ್ಲಿ ಪದೇ ಪದೇ ಹೆಚ್ಚಿನ ಮುಸುಕಿನ ಜೋಳ ಬೆಳೆಯುವುದರಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ ಈ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…