ಮೈಸೂರು

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದರು.

ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀವು ನಿಮ್ಮ ಕೈ ಕೆಳಗಿನ ಅಧಿಕಾರಿಗಳು ನೀಡಿರುವ ವರದಿಯನ್ನು ತಂದು ಸಭೆಯಲ್ಲಿ ಮಂಡಿಸಿದರಷ್ಟೇ ಸಾಲದು. ವಾರಕ್ಕೆ ಒಮ್ಮೆಯಾದರೂ ಕಚೇರಿ ಬಿಟ್ಟು ಗ್ರಾಮೀಣ ಪ್ರದೇಶಕ್ಕೆ ತೆರಳಿ ಬಡವರು, ರೈತರ ಸಂಕಷ್ಟಗಳನ್ನು ಅರಿಯಬೇಕು. ಆಗ ಮಾತ್ರ ನೀವು ಅವರಿಗೆ ಸಹಾಯ ಮಾಡಲು ಸಾಧ್ಯ ಎಂದು ಹೇಳಿದರು.

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಗ್ರಾಮೀಣ ಭಾಗದಲ್ಲಿ ಇನ್ನೂ ಕೂಡ ಸಾಕಷ್ಟು ಮಂದಿಗೆ ಮನೆ ಅಥವ ನಿವೇಶನವಿಲ್ಲ. ಇಂತಹ ವಾಸ್ತವಗಳನ್ನು ಅಧಿಕಾರಿಗಳು ಖುದ್ದು ಸ್ಥಳಕ್ಕೆ ತೆರಳಿ ತಿಳಿಯಬೇಕು. ಮೈಸೂರು ಮುಖ್ಯಮಂತ್ರಿಗಳ ತವರು ಜಿಲ್ಲೆ. ರಾಜರ ಕೊಡುಗೆ ಸಾಕಷ್ಟಿದೆ. ಇಲ್ಲಿ ಹೆಚ್ಚಿನ ಅಭಿವೃದ್ಧಿಯಾಗಲು ಅಧಿಕಾರಿಗಳು ಸಹಕರಿಸಬೇಕು ಎಂದರು.

ಮೈಸೂರು ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275ನ ಭೂಮಿ ವಶಕ್ಕೆ ಪಡೆಯಲಾಗಿದೆಯೇ ಭೂಮಿ ಪಡೆಯಲು ತಕರಾರು ಇರುವ ಕಡೆ ಬಗೆಹರಿಸಿ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ಯಾಂಕ್‌ಗಳು ಗ್ರಾಹಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಮೊದಲ ಬಾರಿ ಲೋನ್ ಪಡೆಯುವವರಿಗೆ ಸಿಬಿಲ್ ಸ್ಕೋರ್ ನೆಪ ಹೇಳಿ ಸತಾಯಿಸಬಾರದು. ರೈತರಿಗೆ ಯಾವುದಾದರೂ ಯೋಜನೆಯಡಿ ಪ್ರೋತ್ಸಾಹಧನ ಬಂದರೆ ಅದನ್ನು ಸಾಲದ ಬಡ್ಡಿಗೆ ವಜಾ ಮಾಡಿಕೊಳ್ಳಬಾರದು ಎಂದು ಲೀಡ್ ಬ್ಯಾಂಕ್ ಮೇನೇಜರ್‌ಗೆ ಸೂಚನೆ ನೀಡಿದರು.

ಹತ್ತಿ ಬೆಳೆ ಬೆಳೆಯುವ ರೈತರ ಸಂಖ್ಯೆ ಕಡಿಮೆ ಬರುತ್ತಿದೆ. ಮುಸುಕಿನ ಜೋಳದ ಬೇಳೆ ಹೆಚ್ಚು ಬೆಳೆಯುತ್ತಿದ್ದಾರೆ. ಒಂದೇ ಭೂಮಿಯಲ್ಲಿ ಪದೇ ಪದೇ ಹೆಚ್ಚಿನ ಮುಸುಕಿನ ಜೋಳ ಬೆಳೆಯುವುದರಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ ಈ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

20 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago