ಹುಣಸೂರು: ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಚಿರತೆಯೊಂದು ತೋಟದ ಮನೆಗೆ ನುಗ್ಗಿ ನಾಯಿ ಮರಿಯನ್ನು ಎಳೆದೊಯ್ದ ಘಟನೆ ನಡೆದಿದೆ.
ಹುಣಸೂರು ತಾಲ್ಲೂಕಿನ ಉಂಡವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ರೈತ ಪ್ರತಾಪ್ ಎಂಬುವವರ ತೋಟದ ಮನೆಗೆ ನುಗ್ಗಿದ ಚಿರತೆ ನಾಯಿ ಮರಿಯನ್ನು ಎಳೆದೊಯ್ದು ತಿಂದು ಹಾಕಿದೆ.
ಚಿರತೆ ನಾಯಿ ಮರಿ ಎಳೆದುಕೊಂಡು ಹೋದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರೈತ ಪ್ರತಾಪ್ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನು ಅಳವಡಿಸಿದ್ದು, ಅನಗತ್ಯವಾಗಿ ಹೊರಗಡೆ ಬರದಂತೆ ಅಕ್ಕಪಕ್ಕದಲ್ಲಿರುವ ಜನತೆಗೆ ಮನವಿ ಮಾಡಿದ್ದಾರೆ.
ಬೆಂಗಳೂರು : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ…
ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ…
ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ…
ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ.…
ಬೆಂಗಳೂರು : ವಾರ್ತಾ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ಸಲ್ಲಿಸಿದ…
ಬೆಂಗಳೂರು: ವೇತನ ಹಿಂಬಾಕಿಗೆ ಒತ್ತಾಯಿಸಿ ಜನವರಿ 29ರಂದು ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಂದು ಬೆಳಗ್ಗೆ 10 ಗಂಟೆಯಿಂದ…