ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚುಂಚನಹಳ್ಳಿ ಗ್ರಾಮದ ರೈತ ನಂಜುಂಡಸ್ವಾಮಿ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಚುಂಚನಹಳ್ಳಿ -ಕೋಣನೂರು ರಸ್ತೆ ಬಳಿ ಇರುವ ಜಮೀನಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚಿರತೆ ಅಟ್ಯಾಕ್ ಮಾಡಿದೆ.
ಬೈಕ್‌ನಲ್ಲಿ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ನಡೆಸಿದೆ. ಇದರ ಪರಿಣಾಮ ಮಗು ಸಮೇತ ರೈತ ದಂಪತಿ ಬೈಕ್‌ನಿಂದ ಬಿದ್ದು ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ತಗಡೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಸಿ ದಾಖಲಿಸಲಾಗಿದೆ.
ಚುಂಚನಹಳ್ಳಿ, ಕೋಣನೂರು, ಹನುಮನಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು, ದಿನನಿತ್ಯ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ. ಅಲ್ಲದೆ ಜಮೀನಿಗೆ ಹೋಗುವ ರೈತರ ಮೇಲು ದಾಳಿ ನಡೆಸಲು ಮುಂದಾಗುತ್ತಿದ್ದು, ಇಂದು ಜಮೀನಿಗೆ ತೆರಳುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಕೂಡಲೇ ಚಿರತೆಯನ್ನು ಬೋನು ಇಟ್ಟು ಸೆರೆ ಹಿಡಿಯಬೇಕು. ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಕಲ್ಯಾಣ ಸಂಘದ ರೈತರು ಒತ್ತಾಯಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…