Mysore
20
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ರವೀಶ್‌ ಎಂಬುವವರಿಗೆ ಸೇರಿದ ಕರುವಿನ ಮೇಲೆ ಬೆಳ್ಳಂಬೆಳಿಗ್ಗೆ ಚಿರತೆ ದಾಳಿ ನಡೆಸಿದೆ. ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಎಳೆದೊಯ್ದ ಚಿರತೆ ಅರೆ ಬರೆ ತಿಂದು ಬಿಸಾಡಿ ಹೋಗಿದೆ.

ತಾಲ್ಲೂಕಿನ ಕೊಣನೂರು, ಚುಂಚನಹಳ್ಳಿ, ಹನುಮನಪುರದಲ್ಲಿ ಚಿರತೆಗಳ ಉಪಟಳ ಹೆಚ್ಚಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

Tags:
error: Content is protected !!