ಮೈಸೂರು

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು : ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸೆರೆಯಾಗಿದೆ.

ಸರಗೂರು ತಾಲ್ಲೂಕಿನ ಎನ್.ಬೆಳತ್ತೂರು ಹಳೆ ಗೇಟ್ ಬಳಿ ರೈತ ಯೋಗೇಶ್ ಎಂಬವರ ಜಮೀನಿನ ಬಳಿ ಕಳೆದ 20 ದಿನಗಳ ಹಿಂದೆ ಅರಣ್ಯ ಇಲಾಖೆಯವರು ಚಿರತೆ ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು. ಮಂಗಳವಾರ ತಡರಾತ್ರಿ ಬೋನಿಗೆ ಭಾರೀ ಗಾತ್ರದ ಗಂಡು ಚಿರತೆ ಸೆರೆಯಾಗಿದೆ.

ಎನ್.ಬೆಳ್ತೂರು ಹಳೆ ಗೇಟ್ ಸಮೀಪ ಇರುವ ಜಮೀನುಗಳಲ್ಲಿ ಹಲವಾರು ತಿಂಗಳಿಂದ ಈ ಚಿರತೆ, ಹಸುಗಳ ಮೇಲೆ ದಾಳಿ ಮಾಡಿ ಸುಮಾರು 37 ಹಸುಗಳನ್ನು ಕೊಂದು ಹಾಕಿತ್ತು. ಈ ಸಂಬಂಧ ಈ ಭಾಗದ ರೈತರು ಚಿರತೆ ಸೆರೆ ಹಿಡಿಯಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯವರು ಬೋನನ್ನು ಇರಿಸಿದ್ದರು.

ಸೆರೆಯಾದ ಚಿರತೆಗೆ ಡಾ.ರಮೇಶ್ ಅವರು ಅರಿವಳಿಕೆ ನೀಡಿದ್ದಾರೆ. ಚಿರತೆಗೆ ರೇಡಿಯೊ ಕಾಲರ್ ಅಳವಡಿಸಿ, ಅರಣ್ಯಕ್ಕೆ ಬಿಟ್ಟಿದ್ದೇವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಎಸಿಎಫ್ ಮಧು, ಆರ್‌ಎಫ್‌ಒ ಸಿದ್ದರಾಜು, ಚಿರತೆ ಕಾರ್ಯಪಡೆ ಸಿಬ್ಬಂದಿಗಳು, ಅರಣ್ಯ ಸಿಬ್ಬಂದಿಗಳು, ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

55 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

2 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

2 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

3 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

4 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

5 hours ago