ಮೈಸೂರು

ಸಾಕು ನಾಯಿ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ನಂಜನಗೂಡು: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ತಾಲ್ಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಿಂದ ಸ್ಥಳೀಯರು ಭಾರೀ ಭಯಭೀತರಾಗಿದ್ದಾರೆ.

ಕೃಷಿ ಭೂಮಿಯ ತೋಟದ ಮನೆಯ ಬಳಿ ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಚಿರತೆಯ ಕಾಟಕ್ಕೆ ಕೃಷಿ ಜಮೀನಿಗೆ ತೆರಳುವ ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವೀರೇಗೌಡನ ಹುಂಡಿ ಗ್ರಾಮದ ಸುತ್ತಮುತ್ತ ಸಾಕಷ್ಟು ದಿನಗಳಿಂದ ಸಾಕು ಪ್ರಾಣಿಗಳನ್ನು ಬಲಿ ಪಡೆದಿದೆ. ಈಗಾಗಲೇ ನಂಜನಗೂಡಿನ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಬೋನು ಇಟ್ಟು ಉಪಟಳ ನೀಡುತ್ತಿರುವ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago