ಎಚ್.ಡಿ.ಕೋಟೆ: ಕಳೆದ ನಾಲ್ಕೈದು ದಿನಗಳ ಹಿಂದೆಯಷ್ಟೇ ಚಿರತೆಯೊಂದು ಸೆರೆಯಾಗಿದ್ದ ಜಾಗದಲ್ಲೇ ಈಗ ಮತ್ತೊಂದು ಚಿರತೆ ಸೆರೆಯಾಗಿದ್ದು, ಜನತೆ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.
ಎಚ್.ಡಿ.ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್ ಬಡಾವಣೆಯ ಸಮೀಪದಲ್ಲಿರುವ ಗುರುಮಲ್ಲು ಎಂಬುವವರ ಜಮೀನಿನಲ್ಲಿ ಚಿರತೆಯೊಂದು ಸೆರೆಯಾಗಿದ್ದು, ಜನತೆಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ.
ಕಳೆದ ಕೆಲ ದಿನಗಳಿಂದ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ರೈತರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ರೈತರ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿದ್ದರು. ಇಂದು ಬೆಳಿಗ್ಗೆ ನಾಯಿಯನ್ನು ತಿನ್ನಲು ಬಂದು ಚಿರತೆ ಬೋನಿಗೆ ಸೆರೆಯಾಗಿದೆ.
ಈ ಜಮೀನಿನಲ್ಲಿ ಇನ್ನೂ ಮೂರ್ನಾಲ್ಕು ಚಿರತೆಗಳಿದ್ದು, ಅವುಗಳನ್ನು ಸಹ ಸೆರೆ ಹಿಡಿಯುವಂತೆ ರೈತರು ಒತ್ತಾಯಿಸಿದ್ದಾರೆ.
ಬೋನಿಗೆ ಸೆರೆಯಾದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯಕ್ಕೆ ಬಿಡಲು ನಿರ್ಧಾರ ಮಾಡಿದ್ದಾರೆ.