ಎಚ್.ಡಿ.ಕೋಟೆ: ತಾಲ್ಲೂಕಿನ ಹೌಸಿಂಗ್ ಬೋರ್ಡ್ ಬಳಿ ಮತ್ತೊಂದು ಚಿರತೆ ಸೆರೆ ಸಿಕ್ಕಿದ್ದು, ಇದು ಒಂದು ತಿಂಗಳ ಅವಧಿಯಲ್ಲಿ ಸೆರೆ ಸಿಕ್ಕ ಐದನೇ ಚಿರತೆಯಾಗಿದೆ.
ನಾಗರಾಜು ಎಂಬುವವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಇನ್ನೂ ಅನೇಕ ಚಿರತೆಗಳಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಒಂದು ವರ್ಷದಿಂದಲೂ ಇಲ್ಲಿ ಚಿರತೆಗಳ ಕಾಟ ಹೆಚ್ಚಾಗಿದ್ದು, ಸಾಕು ಪ್ರಾಣಿಗಳನ್ನು ತಿಂದು ತೇಗುತ್ತಿವೆ.
ಈ ಹಿನ್ನೆಲೆಯಲ್ಲಿ ಚಿರತೆಗಳ ಹಾವಳಿಯನ್ನು ತಪ್ಪಿಸುವಂತೆ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈಗ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಸೆರೆಯಾಗಿದ್ದು, ಇಲ್ಲಿ ಇನ್ನೂ ಮೂರ್ನಾಲ್ಕು ಚಿರತೆಗಳಿರುವ ಶಂಕೆ ವ್ಯಕ್ತವಾಗಿದೆ.
ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದು, ಉಪಟಳ ನೀಡುತ್ತಿರುವ ಮತ್ತಷ್ಟು ಚಿರತೆಗಳನ್ನು ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.





