ಮೆಟ್ಟಿಲುಗಳನ್ನು ಹತ್ತಿ ಓಡಾಡಿ, ಇಳಿದು ತೋಟಕ್ಕೆ ತೆರಳಿದ ಚಿರತೆ ; ಸ್ಥಳೀಯರಲ್ಲಿ ಆತಂಕ
ಎಚ್.ಡಿ.ಕೋಟೆ : ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆಗಳು ಈಗ ಪಟ್ಟಣ ಸಮೀಪವೇ ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಪಟ್ಟಣ ಸಮೀಪದ ಬೆಳಗನಹಳ್ಳಿ ಗ್ರಾಮದ ರೈತ ಸೋಮಶೇಖರ್ ಗೌಡ ಅವರ ಮನೆಗೆ ಚಿರತೆ ಬಂದು ಮನೆಯ ಮೆಟ್ಟಿಲೇರಿ ರಾಜಾರೋಷವಾಗಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.
ಶನಿವಾರ ರಾತ್ರಿ ತೋಟದ ಕಡೆಯಿಂದ ಬಂದ ಗಂಡು ಚಿರತೆ ಸೋಮಶೇಖರ್ ಗೌಡ ಅವರ ಮನೆಯ ಮೇಲೆ ಹೋಗಲು ನಿರ್ಮಿಸಿರುವ ಎರಡು ಅಂತಸ್ತಿನ ಮೆಟ್ಟಲುಗಳನ್ನು ಹತ್ತಿ , ನಂತರ ಇಳಿದು ಮತ್ತೆ ತೋಟದ ಕಡೆ ಹೋಗಿದೆ. ರಾತ್ರಿ ವೇಳೆ ಮನೆಯ ಸಮೀಪವೇ ಚಿರತೆ ಓಡಾಡಿರುವುದರಿಂದ ನಿವಾಸಿಗಳು ಆತಂಕಗೊಂಡು ಮನೆಯಿಂದ ಹೊರಗೆ ಬಂದಿಲ್ಲ.
ಇದನ್ನು ಓದಿ : ತಗ್ಗಲೂರು | ಬೋನಿಗೆ ಬಿದ್ದ ಚಿರತೆ ; ಗ್ರಾಮಸ್ಥರು ನಿರಾಳ
ಭಾನುವಾರ ಬೆಳಿಗ್ಗೆ ಎಂದಿನಂತೆ ಮನೆಯ ಮಾಲೀಕ ಸೋಮಶೇಖರ್ ಸಿಸಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಚಿರತೆ ರಾಜಾರೋಷವಾಗಿ ಮೆಟ್ಟಿಲುಗಳನ್ನು ಹತ್ತಿ ಮನೆಯ ಮೇಲ್ಭಾಗದಲ್ಲಿ ಓಡಾಡಿ ಕೆಳಗಿಳಿದಿರುವುದು ಕಂಡುಬಂದಿದೆ. ಇದರಿಂದ ರೈತರು ಮತ್ತು ಸಾರ್ವಜನಿಕರು ಮತ್ತಷ್ಟು ಆತಂಕಗೊಂಡಿದ್ದಾರೆ. ಚಿರತೆಯ ಚಲನವಲನಗಳನ್ನು ಗಮನಿಸಿದಾಗ, ಆ ವೇಳೆ ಮೇಕೆ, ನಾಯಿ, ಮನುಷ್ಯರು ಕಂಡಿದ್ದರೆ ಚಿರತೆ ದಾಳಿ ಮಾಡುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಅರಣ್ಯ ಇಲಾಖೆಯವರು ಚಿರತೆಗಳನ್ನು ಸೆರೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಪರಿಶೀಲಿಸಿ ಚಿರತೆಯ ಸೆರೆಗೆ ಕಾರ್ಯಾಚರಣೆ ನಡೆಸಿ ಬೋನನ್ನು ಇಟ್ಟಿದ್ದಾರೆ. ಹಗಲು ಮತ್ತು ರಾತ್ರಿಯ ಸಂದರ್ಭದಲ್ಲಿ ರೈತರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಅರಣ್ಯ ಇಲಾಖೆಯವರು ಮನವಿ ಮಾಡಿದ್ದಾರೆ.
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…
ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ…
ಬೆಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.…
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 1)…