ಎಚ್.ಡಿ.ಕೋಟೆ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಸೋಗಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿ ಆತಂಕ ಸೃಷ್ಟಿಸಿದೆ.
ಗ್ರಾಮದ ಶಿವಮೂರ್ತಿ ಹಾಗೂ ದೊರೆಸ್ವಾಮಿ ಅವರ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿದೆ.
ಮೇಕೆಗಳನ್ನು ಕೊಂದು ಎಳೆದೊಯ್ಯುವ ಪ್ರಯತ್ನ ಮಾಡಿದ್ದರೂ, ಹಗ್ಗದಿಂದ ಕಟ್ಟಿದ್ದ ಕಾರಣ ಚಿರತೆ ಎಳೆಯಲು ಸಾಧ್ಯವಾಗದೆ ಸ್ಥಳದಲ್ಲೇ ರಕ್ತ ಕುಡಿದು ಪರಾರಿಯಾಗಿದೆ.
ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.





