ಕೆ.ಆರ್.ನಗರ: ಕಳೆದೊಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಗಂಡು ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಕೆ.ಆರ್.ನಗರ ತಾಲೂಕಿನ ಹೆಬ್ಬಾಳು ಹೋಬಳಿಯ ಹುರುಳಿ ಕಾಮೇನಹಳ್ಳಿ, ಗೌಡೇನಹಳ್ಳಿ ಫಾರ್ಮ್ಹೌಸ್ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಸಂಚಾರ ಹೆಚ್ಚಾಗಿತ್ತು. ಜಾನುವಾರು ಮತ್ತು ನಾಯಿಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆಯಿಂದ, ಸಂಜೆಯಾಗುತ್ತಿದ್ದಂತೆ ಜನರು ಹೊರಬರಲು ಆತಂಕಪಡುತ್ತಿದ್ದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ, ಚಿರತೆ ಓಡಾಟ ಹೆಚ್ಚಿದ್ದ ಸ್ಥಳದಲ್ಲಿ ಬೋನು ಇರಿಸಿತ್ತು. ಆಹಾರ ಅರಸಿ ಬಂದ ಸುಮಾರು ನಾಲ್ಕೈದು ವರ್ಷದ ಗಂಡು ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಚಿರತೆಯನ್ನು ಸುರಕ್ಷಿತವಾಗಿ ಕೊಂಡೊಯ್ದಿದ್ದಾರೆ. ಆರೋಗ್ಯ ತಪಾಸಣೆ ಬಳಿಕ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ ಎಂದು ತಿಳಿದುಬಂದಿದೆ. ಚಿರತೆ ಸೆರೆಯಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು: ‘ಡಿಕೆ ಶಿವಕುಮಾರ್ ಅವರದ್ದು ಬಂಡೆ ಹೃದಯವಲ್ಲ, ಹೂವಿನ ಹೃದಯ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುತ್ತಾರೆ’ ಎಂದು ಕೇಂದ್ರ ಸಚಿವ…
ನವದೆಹಲಿ: ನೀವು ಖರೀದಿಸುವ ಬಾಟಲಿ ನೀರಿನ ಗುಣಮಟ್ಟ ಹೇಗಿದೆ? ಬಿಸ್ಲೆರಿ ನೀರಿನ ವಿವಾದದ ಬೆನ್ನಲ್ಲೇ, ವಿವಿಧ ಬ್ರ್ಯಾಂಡ್ಗಳ ಪ್ಯಾಕೇಜ್ಡ್ ಕುಡಿಯುವ…
ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ.…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದಲ್ಲಿ ಗಂಡಾನೆಯ ಕಳೇಬರ ಪತ್ತೆಯಾಗಿದೆ. ಕುಂದುಕೆರೆ ಗಸ್ತಿನ ಬೂದಿಕಟ್ಟೆ ಅರಣ್ಯ ಪ್ರದೇಶದಲ್ಲಿ…
ಜಗಜ್ಯೋತಿ ಬಸವೇಶ್ವರರನ್ನು ಅವಮಾನಿಸುವ ಕೃತಿ ‘ಬಸವ ಮಂಟಪ’ ಈಗ ವಿವಾದವನ್ನು ಎಬ್ಬಿಸಿದೆ. ಈ ಕೃತಿಯ ಲೇಖಕ ರವಿ ಹಂಜ್ ಹಾಗೂ…
ಎ.ಬಿ.ಇಬ್ರಾಹಿಂ, ಮೈಸೂರು ನಗರಪಾಲಿಕೆ ಮಾಜಿ ಆಯುಕ್ತರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ದಸರಾ ವಾಣಿಜ್ಯೀಕರಣಕ್ಕೆ ಕಡಿವಾಣ ಹಾಕಿ ಮೈಸೂರಿನ ಬ್ರಾಂಡ್…