Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ.

ಕಳೆದ ಒಂದು ವಾರದ ಹಿಂದೆ ಹಸು ಮೇಲೆ ದಾಳಿ ನಡೆಸಿದ್ದ ಚಿರತೆಯಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಇದನ್ನು ಓದಿ: ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ 

ದೂರು ಸ್ವೀಕರಿಸಿದ ಅರಣ್ಯ ಇಲಾಖೆ ಚಿರತೆ ಕಾರ್ಯಪಡೆಯ ಮೂಲಕ ಕಾರ್ಯಾಚರಣೆ ನಡೆಸಿ, ಕೊನೆಗೂ ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

Tags:
error: Content is protected !!