ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು ಬೈಕ್‌ನಲ್ಲಿ ತೆರಳುವಾಗ ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಅರಣ್ಯ ಇಲಾಖೆಯವರು ಗ್ರಾಮಕ್ಕೆ ತೆರಳಿ ಬೋನನ್ನು ಇಟ್ಟಿದ್ದಾರೆ.
ತಾಲ್ಲೂಕಿನಲ್ಲಿ ಕೆಲವು ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಳ್ಳುವ ಮೂಲಕ ರೈತರಿಗೆ ಆತಂಕವನ್ನುಂಟುಮಾಡಿದೆ. ಸಂಜೆ ವೇಳೆ ಜಮೀನಿಗೆ ರೈತರು ನೀರು ಹಾಯಿಸಲು ತೆರಳಲು ಹಿಂಜರಿಯುತ್ತಿದ್ದಾರೆ. ದನ ಕರು ಹಸು, ಮೇಕೆ, ಆಡು, ಕುರಿಗಳನ್ನು ಮೇಯಿಸಲು ಜಮೀನುಗಳಿಗೆ ಹೋಗಲು ಭಯಪಡುವಂತಾಗಿದೆ.
ಈಗಾಗಲೇ ಕೆಲವು ಗ್ರಾಮಗಳಲ್ಲಿ ರಾತ್ರಿವೇಳೆ ಚಿರತೆ ಬೀದಿ ನಾಯಿಗಳನ್ನು ಅರೆಬೆರೆ ತಿಂದು ಹೋಗಿರುವ ಘಟನೆಗಳೂ ನಡೆದಿವೆ. ಹಾಗಾಗಿ ಅರಣ್ಯ ಇಲಾಖೆಯವರು ಬೋನು ಇಟ್ಟಿರುವ ಗ್ರಾಮಗಳಲ್ಲಿ ಡ್ರೋನ್ ಬಳಸಿ, ಶೀಘ್ರದಲ್ಲಿ ಚಿರತೆ ಸೆರೆಹಿಡಿಯುವ ಮೂಲಕ ಗ್ರಾಮದ ಜನರಲ್ಲಿರುವ ಆತಂಕ ಹೋಗಲಾಡಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವ ಡಿಕ್ಕಿ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…
ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…
ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…